ರಾಜ್ಯ ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ!

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮಗೊಂಡಿದ್ದು, 20 ನೂತನ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ 13 ಮಂದಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆಯುತ್ತಿದ್ದಾರೆ. ಸಂಪುಟದಲ್ಲಿ ಒಬ್ಬ ಮಹಿಳೆಗೆ ಮಾತ್ರ ಅವಕಾಶ ದೊರೆತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಈ ಬಾರಿ ಅವಕಾಶ ಸಿಗದೆ ಉಳಿದಿದ್ದಾರೆ. ರಾಜ್ಯ

ನೂತನ ಸಚಿವರು ಆಗಸ್ಟ್‌ 3ರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಹೈಕಮಾಂಡ್‌ ನಾಯಕರಿಂದ ಅಂತಿಮಗೊಳಿಸಲಾದ ಈ ಪಟ್ಟಿಯನ್ನು ಯಾವುದೇ ಅಸಮಾಧಾನ ಉಂಟಾಗದಂತೆ ಸೋಮವಾರ ಬೆಳಗ್ಗೆವರೆಗೆ ಗೌಪ್ಯವಾಗಿರಿಸಲಾಯಿತು. ಖಾಲಿ ಇದ್ದ 20 ಸ್ಥಾನಗಳನ್ನೆಲ್ಲ ಭರ್ತಿ ಮಾಡುವಂತೆ ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ರಾಜ್ಯ

ಇದನ್ನೂ ಓದಿ: ಹವಾಮಾನ ಬದಲಾವಣೆ ಎಚ್ಚರಿಕೆ: ಪ್ರತಿ 1°C ಏರಿಕೆಗೆ ಭಾರತದಲ್ಲಿ ಅಕ್ಕಿ ಉತ್ಪಾದನೆ 6.6% ಕುಸಿತ

ನೂತನ ಸಚಿವರ ಪಟ್ಟಿ

ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ.ಝಡ್. ಝಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಸಿ. ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಮತ್ತು ಲಕ್ಷ್ಮಣ ಸವದಿ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್, ಉಪಸಭಾಧ್ಯಕ್ಷರಾಗಿ ಪೊನ್ನಣ್ಣ, ವಿಧಾನಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪಸಭಾಪತಿಯಾಗಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಹೊಸಬರಿಗೆ ಅವಕಾಶ

ಕಳೆದ ಸಂಪುಟದಲ್ಲಿ ಸಚಿವರಾಗಿರದ ಹಲವರಿಗೆ ಈ ಬಾರಿ ಅವಕಾಶ ದೊರೆತಿದೆ. ಮಳವಳ್ಳಿ ಕ್ಷೇತ್ರದ ಪಿ.ಎಂ. ನರೇಂದ್ರಸ್ವಾಮಿ, ಹಾವೇರಿ ಜಿಲ್ಲೆಯ ರುದ್ರಪ್ಪ ಲಮಾಣಿ, ಮಾಯಕೊಂಡದ ಕೆ.ಎಸ್. ಬಸವಂತಪ್ಪ, ಚಳ್ಳಕೆರೆಯ ಟಿ. ರಘುಮೂರ್ತಿ, ಶಿವಾಜಿನಗರದ ರಿಜ್ವಾನ್ ಅರ್ಷದ್, ಚಾಮರಾಜನಗರದ ಸಿ. ಪುಟ್ಟರಂಗಶೆಟ್ಟಿ, ಜೇವರ್ಗಿಯ ಡಾ. ಅಜಯ್ ಸಿಂಗ್, ಅರಸೀಕೆರೆಯ ಕೆ.ಎಂ. ಶಿವಲಿಂಗೇಗೌಡ, ಮಾಗಡಿಯ ಎಚ್.ಸಿ. ಬಾಲಕೃಷ್ಣ, ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಯಲಬುರ್ಗಾದ ಬಸವರಾಜ್ ರಾಯರೆಡ್ಡಿ, ಹುನಗುಂದದ ವಿಜಯಾನಂದ ಕಾಶಪ್ಪನವರ್ ಹಾಗೂ ಅಥಣಿಯ ಲಕ್ಷ್ಮಣ ಸವದಿ ಸಚಿವ ಸ್ಥಾನ ಪಡೆದಿದ್ದಾರೆ.

ಇದನ್ನೂ ನೋಡಿ: ‘ಶ್ರಮಿಕರ ದೈವ – ಯಕ್ಷಗಾನ ಮತ್ತು ಅಳವು ಅರಿಯದ ಭಾಷೆ: ತುಳು ಮತ್ತು ಬ್ಯಾರಿ’ | ಡಾ. ಗಣನಾಥ ಎಕ್ಕಾರು

Donate Janashakthi Media

Leave a Reply

Your email address will not be published. Required fields are marked *