ಉತ್ತರಾಖಂಡ | ಭೀಕರ ಅಪಘಾತ : ಬಸ್ ಕಂದಕಕ್ಕೆ ಬಿದ್ದು 22 ಮಂದಿ ಪ್ರಯಾಣಿಕರು ಸಾವು

ಅಲ್ಮೋರಾ : ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮ್ನಗರ್ ಬಳಿ ಸೋಮವಾರ ಬೆಳಿಗ್ಗೆ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಬಸ್ ಕಮರಿಗೆ ಬಿದ್ದು ಈ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗರ್ವಾಲ್‌ನಿಂದ ಕುಮೌನ್’ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಘಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆಂದು ವರದಿಗಳು ತಿಳಿಸಿವೆ. ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರದ ಮೊದಲ ಅಧಿವೇಶನ : 370ನೇ ವಿಧಿ ರದ್ದತಿ ವಿರುದ್ಧ ನಿರ್ಣಯ

ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಬಸ್‌ನಿಂದ ಹೊರ ತೆಗೆಯಲಾಗುತ್ತಿದೆ. ಆ್ಯಂಬುಲೆನ್ಸ್ ಕೂಡ ಸ್ಥಳದಲ್ಲಿದೆ ಎಂದು ತಿಳಿಸಿದ್ದಾರೆ.

ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಸುದ್ದಿ ಕೇಳಿ ಬಹಳ ನೋವಾಯಿತು. ಗಾಯಾಗಳು ರಕ್ಷಣೆಗೆ ಕಾರ್ಯಾಚರಣೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಗಾಯಾಳುಗಳ ರಕ್ಷಣೆ ಮಾಡುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡವಂತೆಯೂ ಸೂಚಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.1 ಲಕ್ಷ ಪರಿಹಾರ ನೀಡುವಂತೆ ಆರ್’ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *