ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2023, 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಬೆಂಗಳೂರು
ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ ತಿಳಿಸಿದ್ದಾರೆ.
2023ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಹಾಗೂ 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ‘ವಾರ್ತಾಭಾರತಿ’ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆಯವರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
2024 ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವವರಲ್ಲಿ ಮೈಸೂರಿನ ಹಿರಿಯ ಪತ್ರಕರ್ತ ಟಿ.ಗುರುರಾಜ್, ದೂರದರ್ಶನ ವಾಹಿನಿಯ ವರದಿಗಾರ ಜಯಂತ್ ಇದ್ದಾರೆ.
ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆ ಪಿ.ಶಿಲ್ಪಾ ಅವರನ್ನು ಆಯ್ಕೆ ಮಾಡಲಾಗಿದೆ. ಹಿರಿಯ ವರದಿಗಾರರಾದ ಇಬ್ರಾಹಿಂ ಅಡ್ಯಸ್ಥಳಗೆ ‘ವಾರ್ಷಿಕ ಪ್ರಶಸ್ತಿ’, ಮುಹಮ್ಮದ್ ಅಖಿಲ್ ಅವರು ‘ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿಗೆ ೨೦೨೩ನೇ ಸಾಲಿಗೆ ಹಿರಿಯ ಸಾಹಿತಿ ರಹಮತ್ ತರೀಕೆರೆ, ೨೦೨೪ನೇ ಸಾಲಿಗೆ ಕೆ. ನೀಲಾ (ಕಲಬುರಗಿ) ಅವರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ನೋಡಿ: ದಮನಿತರ ಪರವಾಗಿ ಕೆಂಬಾವುಟ ಮಾತ್ರವೇ ನಿಲ್ಲಲು ಸಾಧ್ಯ- ಎಂ.ಎ.ಬೇಬಿ