2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಬಹಿರಂಗವಾಗಲಿದೆ. ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಆದರೆ ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವು ಸೋಮವಾರ ಅಂದರೆ ನವೆಂಬರ್ 4 ರಂದು ಬಿಡುಗಡೆಯಾಗಲಿದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸ್ಪಷ್ಟ ಬಹುಮತದತ್ತ ಬಿಜೆಪಿ ದಾಪುಗಾಲಿರಿಸಿದ್ದರೆ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಇತ್ತೀಚಿನ ಟ್ರೆಂಡ್ ಪ್ರಕಾರ ಮಧ್ಯಾಹ್ನ 12.50ಕ್ಕೆ ಮಧ್ಯ ಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 116 ಆಗಿದ್ದು ಈಗಾಗಲೇ ಬಿಜೆಪಿ 144 ಸ್ಥಾನಗಳ ಮುನ್ನಡೆಯಲ್ಲಿದ್ದು, ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಭಾರತೀಯ ಜನತಾ ಪಕ್ಷ ಶೇ.48.63 ಮತಗಳನ್ನು ಪಡೆದರೆ ಕಾಂಗ್ರೆಸ್ ಶೇ.40.6 ಮತಗಳನ್ನು ಪಡೆದಿದೆ. 4 ರಾಜ್ಯ
ಇದನ್ನೂ ಓದಿ : ಗಾಯ ಕಥಾ ಸರಣಿ | ಸಂಚಿಕೆ 10 – ಕ್ರೌರ್ಯ ಮೆರೆದ ಧಣಿಗೆ ಮಾನವೀಯತೆಯ ಪಾಠ
ರಾಜಸ್ಥಾನದಲ್ಲಿ ಚುನಾವಣಾ ಆಯೋಗದಿಂದ ದೊರೆತ ಮಾಹಿತಿಯ ಪ್ರಕಾರ. 12.50ಕ್ಕೆ ಬಿಜೆಪಿ 114, ಕಾಂಗ್ರೆಸ್ 70, ಪಕ್ಷೇತರರು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಎಸ್‌ಪಿ 2, ಸಿಪಿಐಎಂ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ 100 ಮ್ಯಾಜಿಕ್ ನಂಬರ್ ಆಗಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಅಧಿಕಾರ ರಚನೆಯತ್ತ ಸಾಗಿದೆ.
ಇತ್ತ ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಛತ್ತೀಸ್ ಗಢದ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 39 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಇನ್ನೂ ಹಲವು ಸುತ್ತಿನ ಮತ ಎಣಿಕೆ ಬಾಕಿ ಇದ್ದು, ಹೀಗಾಗಿ ಇಲ್ಲಿ ಮತ್ತೆ ಕಾಂಗ್ರೆಸ್ ಬಿಜೆಪಿಗೆ ಪೈಪೋಟಿ ನೀಡುವ ಸಾಧ್ಯತೆ ಇದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಲಭಿಸಿರುವ ಟ್ರೆಂಡ್ ಗಳ ಪ್ರಕಾರ ಛತ್ತೀಸ್ ಗಢದಲ್ಲೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾರಿಸಿದ್ದು, ಇಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾಲಿರಿಸಿದೆ. ಆದರೂ ಇಲ್ಲಿ ಹಲವು ಹಂತಗಳ ಮತ ಎಣಿಕೆ ಕಾರ್ಯ ಬಾಕಿ ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಅವಕಾಶ ಇದೆ ಎಂದು ಹೇಳಲಾಗುತ್ತಿದೆ.
ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು ತೆಲಂಗಾಣದ ಒಟ್ಟು 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಭೂತಪೂರ್ವ ಸಾಧನೆ ಮಾಡಿದೆ. ಆಡಳಿತಾರೂಢ ಬಿಆರ್ಎಸ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ಎಐಎಂಐಎಂ 4 ಮತ್ತು ಬಿಜೆಪಿ 3ರಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅಧಿಕಾರ ರಚನೆಗೆ ಇಲ್ಲಿ 60 ಕ್ಷೇತ್ರಗಳ ಅಗತ್ಯತೆ ಇದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಅಧಿಕಾರ ರಚನೆಯತ್ತ ದಾಪುಗಾಲಿರಿಸಿದೆ. 4 ರಾಜ್ಯ
ಈ ವಿಡಿಯೋ ನೋಡಿ : ಮೃಣಾಲ್ ಸೆನ್ ಸರಣಿ ಉಪನ್ಯಾಸ-3 ಭುವನ್ ಶೋಂ ಫಿಲಂ ಕುರಿತು, ಉಪನ್ಯಾಸ ಬಿ ಎಂ ಸುಜಯ್