ತೆಲಂಗಾಣದಲ್ಲಿ ಇಂದು ವಿಧಾನಸಭೆ ಚುನಾವಣೆ 2023, ಆರಂಭ

ಹೈದರಾಬಾದ್‌: ತೆಲಂಗಾಣದ 119 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ಬೆಳಿಗ್ಗೆ 7ರಿಂದ ಮತದಾನ ಪ್ರಾರಂಭಗೊಂಡಿದ್ದು ಸಂಜೆ 6ರವರೆಗೆ ನಡೆಯಲಿದೆ. ವಿಧಾನಸಭೆ ಚುನಾವಣೆ

119 ವಿಧಾನ ಸಭಾ ಕ್ಷೇತ್ರಗಳಲ್ಲಿ 3,17 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಮತ್ತು  ಪ್ರಾದೇಶಿಕ ಪಕ್ಷಗಳು ಸೇರಿದಂತೆ 109 ಪಕ್ಷಗಳಿಂದ 2,290ಒಟ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಧಾನಸಭೆ ಚುನಾವಣೆ

ಚುನಾವಣಾ ಆಯೋಗವು (EC) ಎಲ್ಲಾ 119 ಕ್ಷೇತ್ರಗಳಲ್ಲಿ ಮತದಾನಕ್ಕೆ ವಿಸ್ತಾರವಾದ ವ್ಯವಸ್ಥೆಯನ್ನು ಮಾಡಿದೆ. ಆಯೋಗವು 35,655 ಮತಗಟ್ಟೆಗಳಲ್ಲಿ 1.85 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದ್ದು, 22,000 ಮೈಕ್ರೋ ಅಬ್ಸರ್ವರ್‌ಗಳು ಸಂಪೂರ್ಣ ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ.

ರಾಜ್ಯದಿಂದ ಒಟ್ಟು 45,000 ಸಿಬ್ಬಂದಿ, ಇತರ ಇಲಾಖೆಗಳ 3,000 ಸಿಬ್ಬಂದಿ, ತೆಲಂಗಾಣ ರಾಜ್ಯ ವಿಶೇಷ ಪೊಲೀಸ್ (ಟಿಎಸ್‌ಎಸ್‌ಪಿ) 50 ಕಂಪನಿಗಳು ಮತ್ತು ಕೇಂದ್ರ ಅರೆಸೇನಾ ಪಡೆಗಳ 375 ಕಂಪನಿಗಳನ್ನು ನಿಯೋಜಿಸಲಾಗಿದೆ. ನೆರೆಯ ರಾಜ್ಯಗಳ 23,500 ಗೃಹರಕ್ಷಕರೂ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿಕಾಸ್ ರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದ ವಯನಾಡ್‌ನಿಂದ ಮತ್ತೆ ಸ್ಪರ್ಧಿಸಲಿರುವ ರಾಹುಲ್ ಗಾಂಧಿ!

ಸ್ಪರ್ಧಿಗಳಲ್ಲಿ 221 ಮಹಿಳೆಯರು ಹಾಗೂ ಓರ್ವ ತೃತಿಯ ಲಿಂಗಿ ಸೇರಿದ್ದಾರೆ. ಒಟ್ಟು 103 ಮಂದಿ ಶಾಸಕರು ಈ ಬಾರಿ ಮರು ಸ್ಪರ್ಧಿಸುತ್ತಿದ್ದು, ಬಹುತೇಕರು ಆಡಳಿತಾರೂಢ ಬಿಆರ್‌ಎಸ್‌ನಿಂದ ಕಣಕ್ಕಿಳಿದ್ದಾರೆ.

ತೆಲಂಗಾಣದಲ್ಲಿ  ಈ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ, ಸುಮಾರು 27,600 ಮತದಾರರು ಮನೆಯಿಂದಲೇ ಮತ ಚಲಾಯಿಸಲಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.

ವಿಡಿಯೋ ನೋಡಿ: ದುಡಿಯುವ ಜನರ ಐಕ್ಯ ಹೋರಾಟ ರೂಪಗೊಂಡಿದ್ದು ಹೇಗೆ? – ಎಚ್.ಆರ್. ನವೀನ್ ಕುಮಾರ್ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *