ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ವಿಧಾನಸಭೆ ಕಲಾಪದಲ್ಲಿ ಬಾರೀ ಸದ್ದು ಮಾಡುತ್ತಿದ್ದು, ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ನಡುವೆ ಮಾಡನ್ಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು ಪಟ್ಟಿಯನ್ನು ಬಿಡುಗಡೆ ಮಾಡಿದರು. ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರು ಹಗರಣಗಳ ಪಟ್ಟಿಯನ್ನು ಓದಿದರು. ಇನ್ನೂ ಈ ಹಗರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಹೆಸರುಗಳನ್ನು ಒತ್ತಿ ಹೇಳಿದರು.
ಇದನ್ನು ಓದಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರದರ್ಶಕ ಭ್ರಷ್ಟ ಆಡಳಿತವನ್ನು ಜಾರಿ ಮಾಡಿದ್ದಾರೆ: ಸಿ.ಟಿ. ರವಿ ಟೀಕೆ
ಬಿಜೆಪಿ ಅವಧಿಯಲ್ಲಿ ವಿವಿಧ ಇಲಾಖೆ ಮತ್ತು ನಿಗಮ ಮಂಡಳಿಯಲ್ಲಿ ಹಗರಣ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿದ ವಿವರಗಳು
ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ತಮ್ಮ ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯವರು ಇದೀಗ ಕಾಂಗ್ರೆಸ್ ನಾಯಕರ ಮೇಲೆ ಬೊಟ್ಟು ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ.
ಬಿಜೆಪಿ ಅವಧಿಯಲ್ಲಿ ಲೆಕ್ಕ ಹಾಕಲಾಗದಷ್ಟು ಹಗರಣಗಳು ಬಯಲಾಗುತ್ತಲೇ ಇವೆ. ಈ ಹಗರಣಗಳ ಕುರಿತು ವಿವಿಧ ತನಿಖೆ ನಡೆಯುತ್ತಿವೆ. ಭ್ರಷ್ಟರು ಹಾಗೂ ದುರುಳರು ಜೈಲಿಗೆ ಹೋಗುವ ದಿನಗಳ ದೂರವಿಲ್ಲ ಎಂದು ಅವರು ಗುಡುಗಿದರು.
ಇದನ್ನು ನೋಡಿ : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕದಲ್ಲಿ ಕೆಲ ಗೊಂದಲಗಳಿವೆ – ಸಿಎಂ ಸಿದ್ದರಾಮಯ್ಯJanashakthi Media