ಬೆಂಗಳೂರು: ನಗರದಲ್ಲಿ ಭಾನುವಾರ ಏಪ್ರಿಲ್ 13 ಮಧ್ಯಾಹ್ನ ಪರಿಕ್ಷೆಯ ಭಯದಿಂದ ದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸೌಮ್ಯ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯಕೀಯ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಬೆಂಗಳೂರು
ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದೂ, ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು
ಇದನ್ನೂ ಓದಿ: ಪೆಟ್ರೋಲ್, ಡೀಸಲ್, ಅಡಿಗೆ ಅನಿಲ, ಟೋಲ್ ,ವಿದ್ಯುತ್ ದರ ಏರಿಕೆ ಹಿಂಪಡೆಯಿರಿ – ಸಿಪಿಐ [ಎಂ] ಪ್ರತಿಭಟನೆ
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.
ಪರೀಕ್ಷಾ ಸಮಯದಲ್ಲಿ ಖಿನ್ನತೆಗೆ ಒಳಗಾಗುತ್ತಿದ್ದ ಸೌಮ್ಯಗಳಿಗೆ ಕುಟುಂಬದವರು ಇತ್ತೀಚೆಗೆ ನಂದಿನಿ ಲೇಔಟ್‌ನ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ನಿನ್ನೆ ಮಧ್ಯಾಹ್ನ ಹೊರಗಡೆ ಹೋಗುವುದಾಗಿ ಹೇಳಿದ ಸೌಮ್ಯ, ಅಪಾರ್ಟ್‌ಮೆಂಟ್ ಟೆರೇಸ್ಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ನೋಡಿ: ಪಿಚ್ಚರ್ ಪಯಣ – 155 | ವಿಡಂಬನಾತ್ಮಕ ನಿರೂಪಣೆಯ ಫೆಮಿನಿಚಿ ಫಾತಿಮಾ ವಿಶ್ಲೇಷಣೆ : ಮ ಶ್ರೀ ಮುರಳಿ ಕೃಷ್ಣ