ಏರ್‌ ಇಂಡಿಯಾ ವಿಮಾನ ಪತನ: ಡಿಎನ್‌ಎ ಮೂಲಕ 211 ಜನರ ಗುರುತು ಪತ್ತೆ

ಅಹಮದಾಬಾದ್: ಕಳೆದ ವಾರ ಜೂನ್‌ 12ರಂದು ಗುಜರಾತ್​​ನ ಅಹಮದಾಬಾದ್​​ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಜಿಲ್ಲಾಧಿಕಾರಿಗಳ ವರ್ಗಾವಣೆ

ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್​ ಜೋಶಿ ಮಾತನಾಡಿ, ಡಿಎನ್​ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ. 189 ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಒಂದು ನಿಮಿಷವೂ ವ್ಯರ್ಥವಾಗದೆ ನಾವು ಕೆಲಸ ಮಾಡುತ್ತಿದ್ದೇವೆ. ಸಂಬಂಧಿಕರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ಅಭಿಮಾನಿಗಳ ಉನ್ಮಾದ, ಸರ್ಕಾರದ ಅತ್ಯುತ್ಸಾಹ ಮತ್ತು ಮಾರುಕಟ್ಟೆಯ ದಾಹ Janashakthi Media

Donate Janashakthi Media

Leave a Reply

Your email address will not be published. Required fields are marked *