ಆಧಾರ್ ಕಾರ್ಡ್ ಸಂಖ್ಯೆ ನೀಡಿ ಕತೆಯನ್ನು ವಾಪಸ್‌ ಪಡೆದ ಬೋಳುವಾರ

ಬೆಂಗಳೂರು : ಬೋಳುವಾರ ಮೊಹಮ್ಮದ್ ಕುಂಞ  ತಮ್ಮ ಆಧಾರ್ ಕಾರ್ಡ್ ಸಂಕ್ಯೆ ನೀಡಿಯೇ ಕತೆಯನ್ನು ವಾಪಸ್ಸ ಪಡೆದು, ಶಿಕ್ಷಣ ಸಚಿವರಿಗೆ ಪತ್ರವನ್ನು ಕಳುಹಿಸಿದ್ದಾರೆ.

ಪ್ರಸಕ್ತ ಸಿರಿ ಕನ್ನಡ–ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ (ಪರಿಷ್ಕೃತ) 5 ನೆಯ ತರಗತಿ ಪುಸ್ತಕದ 24 ನೆಯ ಪುಟದಲ್ಲಿರುವ, ‘ಸುಳ್ಳು ಹೇಳಬಾರದು’ ಎಂಬ ಹೆಸರಿನ ನನ್ನ ಪುಟ್ಟ ಕತೆಯೊಂದರ ಆಶಯಗಳು, ಪ್ರಸಕ್ತ ವರ್ಷದಲ್ಲಿ ಪರಿಷ್ಕೃತಗೊಂಡಿರುವ/ಗೊಳ್ಳಲಿರುವ ಇತರ ಕೆಲವು ಪಠ್ಯಗಳ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ, ನಮ್ಮ ಪುಟ್ಟ ಮಕ್ಕಳು ಗೊಂದಲಕ್ಕೊಳಗಾಗುವ ಸಾಧ್ಯತೆಗಳುಂಟು.

ಆದ್ದರಿಂದ, ದಯವಿಟ್ಟು ‘ಸುಳ್ಳು ಹೇಳಬಾರದು’ ಎಂಬ ಈ ನನ್ನ ಕತೆಯನ್ನು ಕಿತ್ತು ಹಾಕಿ, ಪರಿಷ್ಕೃತ ಪಠ್ಯ ಕ್ರಮದ ಆಶಯಗಳಿಗೆ ಹೊಂದಿಕೊಳ್ಳುವ ಬೇರೊಂದು ಪಠ್ಯವನ್ನು ಸೇರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತಿದ್ದೇನೆ ಎಂದು 12 ಸಂಖ್ಯೆ ಆಧಾರ್‌ ನಂಬರ್‌ನ್ನು ಲಗತ್ತಿಸಿ ಪತ್ರ ಬರೆದಿದ್ದಾರೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ, ಎಸ್‌ಜಿ ಸಿದ್ದರಾಮಯ್ಯ, ಸಾಹಿತಿ ಮೂಡ್ನಕೂಡು ಚಿನ್ನಸ್ವಾಮಿ ಹಾಗೂ ಈರಪ್ಪ ಎಂ ಕಂಬಳಿ, ರೂಪಾ ಹಾಸನರವರು  ತಮ್ಮ ಲೇಖನ, ಪ್ರಬಂಧ, ಕವಿತೆಯನ್ನು ಪ್ರಕಟಿಸಲು ಅನುಮತಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *