ರಾಜ್ಯದಲ್ಲಿ ನಗರಾಭಿವೃದ್ಧಿಗೆ 2600 ಕೋಟಿ ಅನುದಾನ: ಸಚಿವ ಬೈರತಿ ಸುರೇಶ್

ಮಂಗಳೂರು :ರಾಜ್ಯದ ನಗರಾಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರವು ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದ್ದು, ನಗರ ಪ್ರದೇಶಗಳ ಮೂಲಸೌಕರ್ಯ ಬಲಪಡಿಸಲು ₹2,600 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ರಾಜ್ಯದಲ್ಲಿ

ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಮಳೆನೀರು ಹರಿವು ವ್ಯವಸ್ಥೆ ಹಾಗೂ ಇತರೆ ನಾಗರಿಕ ಸೌಲಭ್ಯಗಳ ಅಭಿವೃದ್ಧಿಗೆ ಈ ಮೊತ್ತವನ್ನು ಬಳಸಲಾಗುತ್ತದೆ ಎಂದು ಹೇಳಿದರು.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (ಎಂಜಿಎನ್‌ವೈವಿ) ಎರಡನೇ ಹಂತದಡಿ ವಿವಿಧ ನಗರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ರಸ್ತೆ ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ

ಇದನ್ನೂ ಓದಿ : ಪಕ್ಷ ಶಿಸ್ತು ಹೈಕಮಾಂಡ್‌ ನಿಯಮದಂತೆ: ಡಿಕೆ ಶಿವಕುಮಾರ್

ಮಂಗಳೂರು ನಗರದಲ್ಲಿ ಮಾತ್ರವೇ ₹165 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, 60 ವಾರ್ಡ್‌ಗಳಲ್ಲಿ 100ಕ್ಕೂ ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕಾಂಕ್ರೀಟ್ ರಸ್ತೆಗಳು, ಯುಟಿಲಿಟಿ ಡಕ್ಟ್‌ಗಳು, ಬಾಕ್ಸ್ ಡ್ರೇನ್‌ಗಳು ಹಾಗೂ ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ವಿಶೇಷ ಒತ್ತು ನೀಡಲಾಗಿದೆ.

ನಗರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡೇ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ನಗರ ಪ್ರದೇಶಗಳಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಬೈರತಿ ಸುರೇಶ್ ಭರವಸೆ ನೀಡಿದರು. ರಾಜ್ಯದಲ್ಲಿ

ಇದನ್ನೂ ನೋಡಿ : ಡಿಲಿಮಿಟೇಶನ್: ನ್ಯಾಯದ ಮುಖವಾಡದಲ್ಲಿ ಪ್ರಾಬಲ್ಯದ ರಾಜಕಾರಣ! Janashakthi Media

Donate Janashakthi Media

Leave a Reply

Your email address will not be published. Required fields are marked *