ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ (4,47,18,781).24 ಗಂಟೆಗಳಲ್ಲಿ ಕೋವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ.ದೆಹಲಿ, ಕರ್ನಾಟಕ, ಕೇರಳ ಮತ್ತು ಪಂಜಾಬ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಗುಜರಾತ್‌ನಲ್ಲಿ ಒಬ್ಬರು ಅಸುನೀಗಿದ್ದಾರೆ.
ಇದನ್ನೂ ಓದಿ : ಕೋವಿಡ್ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.04ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.77ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 2.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 2.03ರಷ್ಟಾಗಿದೆ.