ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಬಿ.ಸಿ.ನಾಗೇಶ್‌

ತುಮಕೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ರಾಜ್ಯದ ಒಟ್ಟು 1109 ಪರೀಕ್ಷಾ ಕೇಂದ್ರಗಳಲ್ಲಿ 7,26,224 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಅವರು ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ದ್ವಿತೀಯ ಪಿಯುಸಿ ಪರೀಕ್ಷೆ ಈಗ ಮತ್ತಷ್ಟು ಸುಲಭ!

ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ :
ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು  ಎಂದು ತಿಳಿಸಿದ್ದಾರೆ.

ಮುಂದುವರಿದು, ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.  ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *