ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಣೆ

ಬೆಂಗಳೂರು: ಪ್ರಸಕ್ತ ಸಾಲಿನ (2021–22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಏಪ್ರಿಲ್‌ 16ರಿಂದ ಮೇ 6ರವರೆಗೆ ನಡೆಯಲಿದೆ ಎಂದು ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಪಡಿಸಿದೆ.

ಪಿಯುಸಿ ಪರೀಕ್ಷೆ 2022 ವೇಳಾಪಟ್ಟಿಯಂತೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ಪರೀಕ್ಷೆ ನಡೆಯಲಿರುವ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ ವಿಷಯದ ಪರೀಕ್ಷೆ, ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ, ಏಪ್ರಿಲ್ 22 ರಂದು ತರ್ಕಶಾಸ್ತ್ರ ಪರೀಕ್ಷೆ, ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

ಏಪ್ರಿಲ್ 25 ರಂದು ಅರ್ಥಶಾಸ್ತ್ರ ಪರೀಕ್ಷೆ, ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ, ಏಪ್ರಿಲ್​​ 28 ರಂದು ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್​​ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​ ಪರೀಕ್ಷೆ ನಡೆಯಲಿದೆ. ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ, ಮೇ 4 ರಂದು ಇಂಗ್ಲಿಷ್​​ ಭಾಷಾ ಪರೀಕ್ಷೆ, ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ತಾತ್ಕಾಲಿಕ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಮೂರನೇ ಅಲೆ ಸೋಂಕು ಗಣನೀಯವಾಗಿ ಇಳಿಕೆಯಾಗಿದೆ. ಇದರ ಬೆನ್ನಲ್ಲೇ ಮಾ. 28 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಅಂತಿಮಗೊಳಿಸಲಾಗಿದೆ. ಅದರಂತೆ ಏಪ್ರಿಲ್ 16, 2022 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ: 

  • ಏಪ್ರಿಲ್​ 16 ರಂದು ಗಣಿತ ವಿಷಯ
  • ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ
  • ಏಪ್ರಿಲ್ 22 ರಂದು ತರ್ಕಶಾಸ್ತ್ರ
  • ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ
  • ಏಪ್ರಿಲ್ 25 ರಂದು ಅರ್ಥಶಾಸ್ತ್ರ
  • ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ
  • ಏಪ್ರಿಲ್​​ 28 ರಂದು ಕನ್ನಡ ಭಾಷಾ ಪರೀಕ್ಷೆ
  • ಏಪ್ರಿಲ್​​ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​
  • ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
  • ಮೇ 4 ರಂದು ಇಂಗ್ಲಿಷ್​​ ಭಾಷಾ ಪರೀಕ್ಷೆ
  • ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ
Donate Janashakthi Media

Leave a Reply

Your email address will not be published. Required fields are marked *