ಬೆಂಗಳೂರು : ರಾಜ್ಯದಲ್ಲಿ ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.
ಕಲಾ ವಿಭಾಗದಲ್ಲಿ ಬೆಂಗಳೂರು ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನ ತಬಸ್ಸುಮ್ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : ದ್ವಿತೀಯ ಪಿಯುಸಿ ಪರೀಕ್ಷೆ ಈಗ ಮತ್ತಷ್ಟು ಸುಲಭ!
ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ಅನನ್ಯಾ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ಕೌಶಿಕ್ 596 ಅಂಕಗಳನ್ನು ಪಡೆದು ಪ್ರಥಮ ಸ್ಥಾನಗಳಿಸಿದ್ದಾರೆ.
ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.
ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.