ಬೆಂಗಳೂರು| ಪಿಯುಸಿ ನಕಲಿ ಅಂಕಪಟ್ಟಿ ನೀಡುತ್ತಿದ್ದ 3 ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯದಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೇ  ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ನಗರದಲ್ಲಿ ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಗಳು ಬೆಂಗಳೂರು, ಧಾರವಾಡ, ಬೆಳಗಾವಿ ಸೇರಿದಂತೆ ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಿದ್ದರು: ಕೆ.ಎನ್.ರಾಜಣ್ಣ

ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.

ಸ್ಟೆಡಿ ಸೆಂಟರ್​ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು.

ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.

ಇದನ್ನೂ ನೋಡಿ: ಮಾದೇಶ್ವರ ಮತ್ತು ಮಂಟೇಸ್ವಾಮಿ ಬಗ್ಗೆ ನಮಗೆಷ್ಟು ಗೊತ್ತು? Janashakthi Media

Donate Janashakthi Media

Leave a Reply

Your email address will not be published. Required fields are marked *