ಲಖ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಒಂದೇ ದಿನ ಉತ್ತರ ಪ್ರದೇಶ ಮತ್ತು ಗೋವಾ ಸೇರಿ 7 ಮಂದಿ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕೆಲವೇ ಹೊತ್ತುಗಳ ಹಿಂದೆ ಉತ್ತರ ಪ್ರದೇಶ ಕಾರ್ಮಿಕ ಇಲಾಖೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಯನ್ನು ಬಿಟ್ಟು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಅವರ ಬೆನ್ನ ಹಿಂದೆ ಮತ್ತೆ ಮೂವರು ಶಾಸಕರು ಬಿಜೆಪಿ ತೊರೆದಿದ್ದಾರೆ. ಇನ್ನೊಬ್ಬ ಶಾಸಕ ರಾಜೀನಾಮೆ ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ವಾಮಿ ಪ್ರಸಾದ್ ಮೌರ್ಯ ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾಗಿದ್ದು, ಯೋಗಿ ಸರ್ಕಾರ ದಲಿತರು, ಹಿಂದುಳಿದ ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳ ಬಗೆಗೆ ನಿರ್ಲಕ್ಷ್ಯ ತೋರುವುದನ್ನು ನನಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಹೀಗೆ ಇವರು ಬಿಜೆಪಿ ತೊರೆದ ಬೆನ್ನಲ್ಲೇ ಶಾಸಕರಾದ ರೋಶನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ ಮತ್ತು ಭಾಗವತಿ ಸಾಗರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇವರೆಲ್ಲ ಸಮಾಜವಾದಿ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಬಿಜೆಪಿಗೆ ಭಾರೀ ಹಿನ್ನಡೆ : ಕಮಲ ಬಿಟ್ಟು ‘ಸೈಕಲ್’ ಏರಿದ ಕಾರ್ಮಿಕ ಸಚಿವ
“ತಮ್ಮ ಮಾತುಗಳನ್ನು, ದೂರುಗಳನ್ನು ಪಕ್ಷದ ವರಿಷ್ಠರು ಕಿವಿಯ ಮೇಲೆ ಹಾಕಿಕೊಳ್ಳುತ್ತಿಲ್ಲ “ಎಂದು ರಾಜೀನಾಮೆ ನೀಡಿರುವ ಶಾಸಕರು ಆರೋಪಿಸಿದ್ದಾರೆ. ಹೀಗೆ ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ್ದಾಗಿರುವ ಉತ್ತರ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಪಕ್ಷ ತೊರೆಯುತ್ತಿರುವ ಸಚಿವರು ಮತ್ತು ಶಾಸಕರು ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದ್ದಾರೆ.
ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ್ದಾಗಿರುವ ಉತ್ತರ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಪಕ್ಷ ತೊರೆಯುತ್ತಿರುವ ಸಚಿವರು ಮತ್ತು ಶಾಸಕರು ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದ್ದಾರೆ. ಹಲವು ಬಿಜೆಪಿ ನಾಯಕರು ಮತ್ತು ಶಾಸಕರು ಸಮಾಜವಾದಿ ಪಕ್ಷದ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯಿಂದ ಎಸ್ಪಿಯತ್ತ ಬಹಳ ಮಂದಿ ವಲಸೆ ಹೋಗುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳುತ್ತಿವೆ.
ಗೋವಾ : ಇಬ್ಬರು ಬಿಜೆಪಿ ಶಾಸಕರ ರಾಜೀನಾಮೆ : ಗೋವಾದ ಆಡಳಿತ ಪಕ್ಷ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಒಂದೇ ದಿನ ಇಬ್ಬರು ಶಾಸಕರು ಪಕ್ಷ ತೊರೆದಿದ್ದಾರೆ. ಈಗಾಗಲೇ ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಫೆಬ್ರವರಿ 14ರಂದು ಮತದಾನ ನಡೆಯಲಿದೆ.
ಸೋಮವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಹಾಗೂ ಪ್ರವೀಣ್ ಜಾಂತ್ಯೆ ಬಿಜೆಪಿ ತೊರೆದಿದ್ದಾರೆ. ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ ಇಂದು ರಾಜೀನಾಮೆ ಮೂಲಕ ಬಿಜೆಪಿಯ ನಾಲ್ವರು ಶಾಸಕರು ಇದುವರೆಗೂ ರಾಜೀನಾಮೆ ನೀಡಿದ್ದಾರೆ. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಿಗದಿಯಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ನಾಲ್ವರು ಶಾಸಕರು ಪಕ್ಷ ತೊರೆದಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಹಿನ್ನಡೆಯಾಗಿದೆ.