ಬೆಳಗಾವಿ: ರಾಜ್ಯ ಸರ್ಕಾರವು, ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ಡಿಸೆಂಬರ್ 11ರಂದು ವಿಧಾನಸಭೆಯಲ್ಲಿ ಮಂಡಿಸಿದೆ.
ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಅವಕಾಶ ನೀಡುತ್ತದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ವಿಧಾನಸಭೆಯಲ್ಲಿ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ(ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಮಸೂದೆ, 2025’ ಅನ್ನು ಮಂಡಿಸಿದ್ದು, ಅದರಲ್ಲಿ 20 ರೀತಿಯ ಸಾಮಾಜಿಕ ಬಹಿಷ್ಕಾರಗಳನ್ನು ಪಟ್ಟಿ ಮಾಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ | ಮಧ್ಯವರ್ತಿಗಳು RTO ಕಚೇರಿಗಳಲ್ಲಿ ಕಂಡುಬಂದರೆ ಅಧಿಕಾರಿಗಳು ಸಸ್ಪೆಂಡ್ – ಸಚಿವ ರಾಮಲಿಂಗಾರೆಡ್ಡಿ
ಮಸೂದೆಯಲ್ಲಿ ಯಾವುದೇ ವ್ಯಕ್ತಿ, ಕುಟುಂಬದೊಂದಿಗೆ ವ್ಯವಹರಿಸಲು ನಿರಾಕರಿಸುವುದು, ಅವರ ಕೆಲಸ ಮಾಡಲು ಅಥವಾ ವ್ಯಾಪಾರ ಮಾಡಲು ನಿರಾಕರಿಸುವುದು; ಸೇವೆಗಳನ್ನು ನಿರಾಕರಿಸಿದರೆ ಜೈಲು ಶಿಕ್ಷ ಗ್ಯಾರಂಟಿ ಎಂದು ಹೇಳಲಾಗಿದೆ.
ರಾಜ್ಯದ ವಿವಿಧ ಸಮುದಾಯಗಳಲ್ಲಿ ಸಾಮಾಜಿಕ ಬಹಿಷ್ಕಾರ ಹಾಕುವುದು, ಜಾತಿ ಸಭೆ ಅಥವಾ ಸಮುದಾಯ ಪಂಚಾಯತ್‌ಗಳ ಮೂಲಕ ವಿವಿಧ ಶಿಕ್ಷೆಗಳನ್ನು ವಿಧಿಸುವ ಅಸಂವಿಧಾನಿಕ ಪದ್ಧತಿಗಳು ಇನ್ನೂ ಆಚರಣೆಯಲ್ಲಿವೆ. ಇದರ ಪರಿಣಾಮವಾಗಿ ವ್ಯಕ್ತಿಗಳು ಅಥವಾ ಕುಟುಂಬ ತಮ್ಮ ಜೀವನವನ್ನು ಘನತೆಯಿಂದ ನಡೆಸುವಲ್ಲಿ ಹೆಚ್ಚಿನ ಕಿರುಕುಳ ಅನುಭವಿಸುತ್ತಾರೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಕೊಂದವರು ಯಾರು? ಎಂಬುದು ಹೊರಬರಲಿ – ಡಾ. ನಾಗಲಕ್ಷ್ಮೀ ಚೌಧರಿJanashakthi Media
