ಬಾರ್ಡರ್ – ಗಾವಸ್ಕರ್ ಟ್ರೋಫಿ, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಡಿಲೇಡ್ ನ ಅಡಿಲೇಡ್ ಓವಲ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಸಿಸ್ ಪ್ರವಾಸದಲ್ಲಿ ಏಕದಿನ ಸರಣಿ ಕಳೆದುಕೊಂಡರೂ ಟಿ20 ಸರಣಿಯನ್ನು ತಮ್ಮದಾಗಿಸಿಕೊಂಡಿರುವ ಭಾರತ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸುವ ಹುಮ್ಮಸ್ಸಿನಲ್ಲಿದೆ. ಇದು ಹಗಲು ರಾತ್ರಿ ನಡೆಯುವ ಪಿಂಕ್ ಬಾಲ್ ಟೆಸ್ಟ್ ಆಗಿದ್ದು, ಭಾರತಕ್ಕೆ ಇದು ಕೊರೊನಾ ಕಾಲದ ಮೊದಲ ಟೆಸ್ಟ್ ಆಗಿದೆ.
ಆರಂಭಿಕ ಆಘಾತ : ಆರಂಭಿಕ ಆಟಗಾರ ಪೃಥ್ವಿ ಶಾ ಖಾತೆತೆರೆಯದೆ ಮಿಚಲ್ ಸ್ಟಾರ್ಕ್ ಅವರಿಗೆ ವಿಕೆಟ್ ಒಪ್ಪಿಸಿದರು. ಮಯಂಕ ಅಗರ್ವಾಲ 17 ರನ್ನು ಗಳಿಸಿ ಔಟ್ ಆಗಿದ್ದಾರೆ. ಚೇತೇಶ್ವರ ಪೂಜರ್ 17 ರನ್ನ ಗಳಿಸಿ ಪ್ಯಾಟ್ ಕಮಿನ್ಸ್ ಗೆ ವಿಕೇಟ್ ಒಪ್ಪಿಸಿದರು. ವಿರಾಟ್ ಕೋಹ್ಲಿ 05 ರನ್ನು ಗಳಿಸಿ ಕ್ರೀಸ್ ನಲ್ಲಿದ್ದಾರೆ. ಚಹ ವಿರಾಮದ ವೇಳಗೆ ಭಾರತ 25 ಓವರ್ ಗಳಲ್ಲಿ 2 ವಿಕೇಟ್ ನಷ್ಟಕ್ಕೆ 41 ರನ್ ಗಳಿಸಿದೆ.
ಕೊಹ್ಲಿ ಟಾಸ್ ಗೆದ್ದ ಪಂದ್ಯಗಳಲ್ಲಿ ಭಾರತದ ಗೆಲುವಿನ ಪ್ರಮಾಣ ಹೆಚ್ಚಿದ್ದು, ಈ ಹಿಂದೆ ಕೊಹ್ಲಿ 26 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದು, ಈ ಪೈಕಿ 21 ಪಂದ್ಯಗಳಲ್ಲಿ ಭಾರತ ತಂಡ ಜಯಗಳಿಸಿದೆ. 4 ಪಂದ್ಯ ಡ್ರಾ ಆಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಇದೇ ಅಜೇಯ ದಾಖಲೆ ಮುಂದುವರೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ತಂಡಗಳು:
ಆಸ್ಟ್ರೇಲಿಯಾ : ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ ಮತ್ತು ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್
ಭಾರತ : ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಹನುಮವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ