INDIA ಮೈತ್ರಿಕೂಟದ 31 ಸದಸ್ಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಶಾಂತಿ ಮರುಸ್ಥಾಪಿಸುವಂತೆ ಮನವಿ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ದ ಸಂಸದರು ಮತ್ತು ಹಲವು ನಾಯಕರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರಪತಿಗಳ ಭೇಟಿ ಮಾಡಿದ ವಿಪಕ್ಷಗಳ ಸಂಸದರು, ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ಶಾಂತಿ ಮರುಸ್ಥಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪತಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, INDIA ಮೈತ್ರಿಕೂಟದ 31 ಸದಸ್ಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿಲಾಯಿತು. ಮಣಿಪುರಕ್ಕೆ ಭೇಟಿ ನೀಡಿದ 21 ಸಂಸದರ ನಿಯೋಗವು ಅಲ್ಲಿನ ಪರಿಸ್ಥಿತಿಯನ್ನು ರಾಷ್ಟ್ರಪತಿಗಳಿಗೆ ವಿವರಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ವಿಶೇಷವಾಗಿ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು, ಪುನರ್ವಸತಿಯಲ್ಲಿನ ಪರಿಸ್ಥಿತಿಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ. ಪ್ರಧಾನಮಂತ್ರಿ ನರೇಂದ್ರ  ಮೋದಿಯವರು ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *