ಬೆಂಗಳೂರು: ಸೋಮವಾರ ದಂದು ನಗರದಾದ್ಯಂತ ಬೆಂಗಳೂರು ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ 314 ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯಪಾನ
ಅಕ್ಟೋಬರ್ 21 ರಿಂದ ಅಕ್ಟೋಬರ್ 27 ರವರೆಗೆ 25,383 ವಾಹನಗಳನ್ನು ಪರಿಶೀಲಿಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಮುಡಾ ಪ್ರಕರಣ: ಬೆಂಗಳೂರು, ಮೈಸೂರಿನಲ್ಲಿ ಇಡಿ ಹೊಸ ಶೋಧ
“ಬೆಂಗಳೂರು ನಗರದಲ್ಲಿ ಕುಡಿದು ವಾಹನ ಚಲಾಯಿಸುವ ಹಾವಳಿಗೆ ಕಡಿವಾಣ ಹಾಕಲು ಮತ್ತು ರಸ್ತೆ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ವಿಶೇಷ ಅಭಿಯಾನವನ್ನು ನಡೆಸಲಾಗಿದೆ. ಸಂಚಾರ ನಿಯಮಗಳು ಮತ್ತು ನಿಬಂಧನೆಗಳನ್ನು ಜಾರಿಗೊಳಿಸಲು ಸಂಚಾರ ಪೊಲೀಸ್ ಇಲಾಖೆಯು ಇಂತಹ ಡ್ರೈವ್ ಗಳನ್ನ ನಡೆಸುವುದನ್ನು ಮುಂದುವರಿಸುತ್ತದೆ. ಒಟ್ಟು 314 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುವುದು ಅಥವಾ ಸವಾರಿ ಮಾಡುವುದು ಕಂಡುಬಂದಿದೆ” ಎಂದು ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ತಿಳಿಸಿದ್ದಾರೆ.
ಇದನ್ನೂ ನೋಡಿ: ಭ್ರಷ್ಟ ರಾಜಕೀಯ ಹಾಗೂ ಅಧಿಕಾರಶಾಹಿಗೆ ಅಮಾಯಕ ಕಟ್ಟಡ ಕಾರ್ಮಿಕರು ಬಲಿ Janashakthi Media