ಮನೆಗೆ ನುಗ್ಗಿದ ಟ್ರಕ್ ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಸೇರಿ ನಾಲ್ವರ ಸಾವು

ಮೈನಪುರಿ : ಮನೆಯೊಳಕ್ಕೆ ಏಕಾಏಕಿ ಟ್ರಕ್​ ನುಗ್ಗಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್, ಅವರ ಪತ್ನಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೈನಪುರಿಯಲ್ಲಿ ನಡೆದಿದೆ.

ಕುರವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ.ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮೈನ್‌ಪುರಿ ಎಸ್‌ಪಿ ಕಮಲೇಶ್ ದೀಕ್ಷಿತ್, ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಮನೆಯೊಳಕ್ಕೆ ಟ್ರಕ್​ ನುಗ್ಗಿಸಿದ್ದಾನೆ. ಇದರಿಂದ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ. ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಮತ್ತು ಅವರ ಪತ್ನಿ, ಟ್ರಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಕೆಲವರು ಆತಂಕ ವ್ಯಕ್ತ ಪಡಿಸಿದ್ದರೆ, ಇನ್ನೊಂದಿಷ್ಟು ಮಂದಿ ಶಂಕೆ ವ್ಯಕ್ತಪಡಿಸಿದ್ದಾರೆ. ಇದು ಅಚಾನಕ್ಕಾಗಿ ಆದ ಅಪಘಾತವೋ ಅಥವಾ ಉದ್ದೇಶಪೂರ್ವಕವಾಗಿ ಮಾಡಿದ ಕೊಲೆಯೋ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *