ವಿಷಪ್ರಾಶನ ಮಾಡಿ 4 ಹುಲಿಗಳು ಸಾವು; ಐವರ ಬಂಧನ

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಜೂನ್ 25 ಬುಧವಾರದಂದು ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ವಿಷಪ್ರಾಶನ

ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಭಂದಿಸಿದ್ದಾರೆ.

ಹಸುವಿಗೆ ಇಬ್ಬರು ವಿಷಪ್ರಾಶನ ಮಾಡಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹಸುವಿಗೆ ಇಟ್ಟ ವಿಷಯದಿಂದ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿ ಸಾವು ಸಂಬಂಧ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ತೀರ್ಪು | 3 ಲಕ್ಷಕ್ಕೂ ಕಟ್ಟಡ ಮಾಲೀಕರಿಗೆ ಸಂಕಷ್ಠ

ಪ್ರಕರಣ ಹಿನ್ನೆಲೆ?

ಜೂನ್‌ 25 ಬುಧವಾರ ಸಂಜೆ ಅರಣ್ಯ ಸಿಬ್ಬಂದಿ ಗಸ್ತು ನಡೆಸುವಾಗ ಈ ಹುಲಿಗಳ ಅಸಹಜ ಸಾವನ್ನಪ್ಪಿರುವುದು ಗೊತ್ತಾಗಿದೆ. ಮೇಲ್ನೋಟಕ್ಕೆ ತಾಯಿ ಹುಲಿ ಮತ್ತು ಮರಿಗಳು ವಿಷಪ್ರಾಶನದಿಂದ ಅಸುನೀಗಿರುವ ಶಂಕೆ ವ್ಯಕ್ತವಾಗಿದೆ‌. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಸಹ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಸತ್ಯಾಂಶ ಕಂಡುಹಿಡಿಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *