ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಮೇಲ್ಮನೆ

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. ಆಕಾಂಕ್ಷಿಗಳನ್ನು ಮಾತ್ರ ನಾವು ಚರ್ಚೆಗೆ ಪರಿಗಣಿಸಿಲ್ಲ. ಆಕಾಂಕ್ಷಿಗಳಲ್ಲದವರನ್ನೂ ಚರ್ಚೆಗೆ ತೆಗೆದುಕೊಂಡಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಮೇಲ್ಮನೆ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಪಕ್ಷದ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಪಕ್ಷದ ಕೋರ್ ಕಮಿಟಿ ಸದಸ್ಯರ ಸಭೆ ನಡೆಸಲಾಗಿದೆ ಎಂದು ವಿವರಿಸಿದರು.

ಇದನ್ನು ಓದಿ : ಸರ್ಕಾರಿ ಹೊರಗುತ್ತಿಗೆ ಮೀಸಲಾತಿ, ಸಾಮಾಜಿಕ ನ್ಯಾಯ, ಮೂಗಿಗೆ ತುಪ್ಪವೇ?

ರಾಜ್ಯದ ವಿವಿಧ ಭಾಗಗಳ ಸುಮಾರು 40ಕ್ಕೂ ಹೆಚ್ಚು ಹೆಸರುಗಳ ಕುರಿತು ಚರ್ಚೆ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರಿಗೆ ಕೇಂದ್ರದ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಣಯ ಮಾಡುವ ಅಧಿಕಾರವನ್ನು ಕೋರ್ ಸಮಿತಿ ಕೊಟ್ಟಿದೆ ಎಂದು ತಿಳಿಸಿದರು.

ಅವರು ಕೇಂದ್ರದ ಜೊತೆ ಸಮಾಲೋಚನೆ ನಡೆಸಿ ಪಕ್ಷದ ಕಡೆಯಿಂದ ವಿಧಾನಪರಿಷತ್ತಿನ ಅಭ್ಯರ್ಥಿಗಳು ಯಾರೆಂದು ನಿಶ್ಚಯಿಸುತ್ತಾರೆ. ಜೊತೆಗೆ ವಿಧಾನಪರಿಷತ್ತಿಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಗೆಲುವಿನ ದೃಷ್ಟಿಯಿಂದ ಕೆಲವು ಸಲಹೆ- ಸೂಚನೆ ಕೊಟ್ಟಿದ್ದಾರೆ ಎಂದರು. ಮೇಲ್ಮನೆ

ಇದನ್ನು ನೋಡಿ : ಪೆನ್ ಡ್ರೈವ್ ಪ್ರಕರಣ ದಿಕ್ಕು ತಪ್ಪುತ್ತಿದೆ, ಸಾಕ್ಷಿ ನಾಶ ಸಾಧ್ಯತೆ – ವಕೀಲ ಸಿ ಎಚ್. ಹನುಮಂತರಾಯ ಆರೋಪ

Donate Janashakthi Media

Leave a Reply

Your email address will not be published. Required fields are marked *