ತುಮಕೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ತುಮಕೂರಿಗೆ ಭೇಟಿ ನೀಡಿದ್ರು ಸಿದ್ದಗಂಗಾ ಮಠದ ಯಾತ್ರಿ ನಿವಾಸದಲ್ಲಿ ಆರಂಭಿಸಲಾಗಿರೋ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದರು
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಈ ವೇಳೆ ಯಡಿಯೂರಪ್ಪಗೆ ಡಿಸಿಎಂ ಅಶ್ವತ್ಥ್‌ನಾರಾಯಣ್ ಹಾಗೂ ಸಂಸದ ಜಿ.ಎಸ್.ಬಸವರಾಜು ಸಾಥ್ ನೀಡಿದರು.
ನಗರದಲ್ಲಿ ಮಾತನಾಡಿದ ಸಿಎಂ, ಇಡೀ ರಾಜ್ಯದಲ್ಲಿ ಹೆಚ್ಚು ಕೋವಿಡ್ ಕೇಸ್ ಇದ್ದ ತುಮಕೂರಿಗೆ ಬಂದು ಸಮಾಲೋಚನೆ ಮಾಡಿದ್ದೇನೆ. ಕೋವಿಡ್ ತಡೆಯೋದ್ರಲ್ಲಿ ವಿಶೇಷ ಪ್ರಯತ್ನ ಮಾಡಿದ್ದಾರೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಎರಡನೇ ಕೊರೊನಾ ಅಲೆಯಲ್ಲಿ 0.66% ಮರಣ ಪ್ರಮಾಣ ಇದೆ. ಪಾಸಿಟೀವ್ ರೇಟನ್ನ ಏನಾದ್ರೂ ಮಾಡಿ 10% ಒಳಗೆ ಇಳಿಸಬೇಕಿದೆ.ತುಮಕೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ತುಮಕೂರಿಗೆ ಭೇಟಿ ನೀಡಿದ್ರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲೆಯಲ್ಲಿ ಕೋವಿಡ್ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆಮ್ಲಜನಕದ ಕೊರತೆ ತೀವ್ರವಾಗಿದ್ದು, ಹೆಚ್ಚುವರಿ ಆಮ್ಲಜನಕ ಪೂರೈಸುವಂತೆ ಮನವಿ ಮಾಡಿದರು. ದೊಡ್ಡ ಜಿಲ್ಲೆಯಾಗಿದ್ದು, ಜನಸಂಖ್ಯೆಯ ಪ್ರಮಾಣವೂ ಹೆಚ್ಚಿರುವುದರಿಂದ ಈಗ ನೀಡುತ್ತಿರುವುದಕ್ಕಿಂತ ಹೆಚ್ಚು ಕೋವಿಡ್ ಲಸಿಕೆ ನೀಡುವಂತೆ ಬೇಡಿಕೆ ಸಲ್ಲಿಸಿದರು.