ಗುಜರಾತ್‌: ಐದು ವರ್ಷದಲ್ಲಿ 41 ಸಾವಿರಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!

ಅಹಮದಾಬಾದ್: ಗುಜರಾತ್‌ ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 41 ಸಾವಿರಕ್ಕೂ ಅಧಿಕ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿಯೊಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB)ದ ಅಂಕಿ ಅಂಶಗಳಂತೆ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246 ಮತ್ತು 2019 ರಲ್ಲಿ 9,268, 2020ರಲ್ಲಿ 8,290 ಮಹಿಳೆಯರು ಸೇರಿದಂತೆ ಒಟ್ಟು 41,621 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಎನ್ ಸಿಆರ್ ಬಿ ವರದಿಯಲ್ಲಿ ಹೇಳಿದೆ.

ಅಹಮದಾಬಾದ್ ಮತ್ತು ವಡೋದರಾದಲ್ಲಿ ಕೇವಲ ಒಂದು ವರ್ಷದಲ್ಲಿ 4,722 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು 2021 ರಲ್ಲಿ ರಾಜ್ಯ ಸರ್ಕಾರವೇ ವಿಧಾನಸಭೆಗೆ ಮಾಹಿತಿ ನೀಡಿತ್ತು. ಕೆಲವು ಪ್ರಕರಣಗಳಲ್ಲಿ ಯುವತಿಯರನ್ನು ಗುಜರಾತ್ ಹೊರತು ಪಡಿಸಿ ಇನ್ನಿತರ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವುದನ್ನು ನಾನು ಗಮನಿಸಿದ್ದೇನೆ’ ಎಂದು ಮಾಜಿ ಐಪಿಎಸ್ ಅಧಿಕಾರಿ ಮತ್ತು ಗುಜರಾತ್ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್ ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿಮೋರ್ಬಿ ಸೇತುವೆ ದುರಂತ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಗುಜರಾತ್‌ ಹೈಕೋರ್ಟ್‌

ನಾಪತ್ತೆಯಾದ ಮಹಿಳೆಯರು ಹಾಗೂ ಬಾಲಕಿಯರ ಪೈಕಿ ಕೆಲವರನ್ನು ವೇಶ್ಯಾವಾಟಿಕೆಗೆ ಗುಜರಾತ್‌ನ ಹೊರಗೆ ಕಳುಹಿಸಲಾಗಿದೆ’ ಎಂದು ಗುಜರಾತ್‌ ರಾಜ್ಯದ ಮಾನವ ಹಕ್ಕು ಆಯೋಗದ ಸದಸ್ಯ ಸುಧೀರ್‌ ಸಿನ್ಹಾ ಹೇಳಿದ್ದಾರೆ.

‘ಪೊಲೀಸ್‌ ವ್ಯವಸ್ಥೆಯಲ್ಲಿ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಇಂಥ ಪ್ರಕರಣಗಳು ಕೊಲೆಗಿಂತ ಗಂಭೀರವಾದುದು. ಯಾಕೆಂದರೆ ಒಂದು ಮಗು ಕಾಣೆಯಾದರೆ, ಆಕೆಯ ಆಗಮನಕ್ಕೆ ಪೋಷಕರು ವರ್ಷಪೂರ್ತಿ ಕಾಯುತ್ತಿರುತ್ತಾರೆ. ಕೊಲೆ ಪ್ರಕರಣಕ್ಕಿಂತ ಕಠಿಣವಾಗಿ ತನಿಖೆ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕರುಗಳು ದಿ ಕೇರಳ ಸ್ಟೋರಿ, ಅಲ್ಲಿಂದ ನಾಪತ್ತೆಯಾದ ಹುಡುಗಿಯರ ಬಗ್ಗೆ ಮಾತನಾಡುತ್ತಾರೆ. ಆದರೆ ಗುಜರಾತ್​​ನಿಂದ 5ವರ್ಷಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಅದೂ ಕೂಡ ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರು,  ಈ ವರದಿ ಬಗ್ಗೆ ಏನು ಹೇಳುತ್ತಾರೆ ಎಂದು ಗುಜರಾತ್​ ಕಾಂಗ್ರೆಸ್​ನ ವಕ್ತಾರ ಹಿರೆನ್​ ಬಂಕರ್ ಅವರು ಪ್ರಶ್ನಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *