ಬಳ್ಳಾರಿ: ಬಳ್ಳಾರಿ ಜಿಲ್ಲೆಯಿಂದ ತಮಿಳುನಾಡಿಗೆ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ 20 ಲಾರಿಗಳನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಅದಿರು ರಫ್ತು ಮಾಡುವುದನ್ನು 2010ರಲ್ಲೇ ನಿಷೇಧಿಸಲಾಗಿದೆ. ಹೀಗಿದ್ದರೂ ಅದನ್ನು ಉಲ್ಲಂಘಿಸಿ 20 ಲಾರಿಗಳಲ್ಲಿ ‘ರಾಕ್ ಡಸ್ಟ್’ ಸಾಗಿಸಲಾಗುತ್ತಿತ್ತು. ರಾತ್ರಿ ಸಮಯದಲ್ಲಿ ಬಳ್ಳಾರಿಯಿಂದ ತಮಿಳುನಾಡುಗೆ ಪರ್ಮಿಟ್ ಇಲ್ಲದೆ ಐರನ್ ಓರ್ ಫೈನ್ಸ್ ಸಾಗಾಣಿಕೆ ಮಾಡುತ್ತಿರುತ್ತಾರೆಂದು ಮಾಹಿತಿ ಮೇರೆಗೆ ಮಾನ್ಯ ಹೆಚ್ಚುವರಿ ಪೊಲೀಸ್ ಅದೀಕ್ಷಕರು, ಹಾಗೂ ಜಿಲ್ಲಾ ಪೊಲೀಸ್ ಅಪರಾಧ ವಿಭಾಗದ ಸಿಬ್ಬಂದಿಯವರು ಹಾಗೂ ಬಳ್ಳಾರಿ ಗ್ರಾಮೀಣ ಪೋಲೀಸ್ ಠಾಣಾ ಸಿಬ್ಬಂದಿಯವರು ಹಲಕುಂದಿ ಬಳಿ ಇರುವ ಬಳ್ಳಾರಿ ಇಸ್ಪಾತ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಮೇಲೆ ದಾಳಿ ನಡೆಸಿದ್ದದಾರೆ.
ಈ ವೇಳೆ ಇಸ್ಪಾತ್ ಕಾರ್ಖಾನೆಯವರು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದೆ. ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 20 ಲಾರಿ ಮತ್ತು ಚಾಲಕರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.