ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ ದೂರು ನೀಡಿರುವ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ವಾಗ್ದಾಳಿ ಮಾಡಿದ್ದಾರೆ. ಸ್ನೇಹಮಯಿ ಕೃಷ್ಣ ಓರ್ವ ಬ್ಲಾಕ್ಮೇಲರ್ ಎಂದು ಆರೋಪಿಸಿದ್ದಾರೆ.
ಮೈಸೂರು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸಿ ವಿಚಾರ ನಡೆಸುವಂತೆ ಆಗ್ರಹಿಸಿದ್ದಾರೆ.
ಇದನ್ನು ಓದಿ : ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯನನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮತ್ತೊಂದು ದೂರು
ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪ ಮಾಡಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು (ಲಕ್ಷ್ಮಣ್) ಪ್ರತಿನಿತ್ಯ ಲೋಕಾಯುಕ್ತಗೆ ಹೋಗುತ್ತಿದ್ದಾರೆಂದು ಆರೋಪಿಸಿದ್ದಾರೆ. ಆದರೆ ನಾನು ಒಮ್ಮೆ ಮಾತ್ರ ಹೋಗಿದ್ದೇನೆ. ಲೋಕಾಯುಕ್ತ ಕಚೇರಿ ಪಕ್ಕದಲ್ಲಿರುವ ಹೋಟೆಲ್‌ಗೆ ಕಾಫಿ ಕುಡಿಯಲು ಪ್ರತಿನಿತ್ಯ ಹೋಗುತ್ತೇನೆ. ಸ್ನೇಹಮಯಿ ಕೃಷ್ಣ ಓರ್ವ ಬ್ಲಾಕ್ಮೇಲರ್. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಪಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಇದನ್ನು ನೋಡಿ : ಭೂಮಿ ಉಳಿವಿಗಾಗಿ ಹೋರಾಡುತ್ತಿದ್ದ ನಾಯಕರನ್ನು ಬಂಧಿಸಿದ ಕಾಂಗ್ರೆಸ್ ಸರಕಾರJanashakthi Media