ಕೋಲಾರ:ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಟ್, ಸೂಚನೆ ಫಲಕಗಳು

ಕೋಲಾರ:ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಟ್, ಸೂಚನೆ ಫಲಕಗಳು ಸೇರಿದಂತೆ ಅಗತ್ಯ ಕ್ರಮಗಳನ್ನು ಕೂಡಲೇ ಅಳವಡಿಸಬೇಕು ಜಿಲ್ಲಾಧಿಕಾರಿ ಡಾ ಆರ್ ಸೆಲ್ವಮಣಿ ಅಧಿಕಾರಿಗೆ ಸೂಚಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಪಘಾತಗಳ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಅವುಗಳನ್ನು ಪರಿಶೀಲನೆ ಮಾಡಿ ಅಪಘಾತಗಳು ಆಗದಂತೆ ಮುಂಜಾಗೃತಾ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : “ಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ” ಜೂನ್‌ 26 ಕ್ಕೆ ರಾಜಭವನ ಚಲೋ

ಕೊಂಡರಾಜನಹಳ್ಳಿ ಬೈಪಾಸ್ ರಸ್ತೆಯಲ್ಲಿ ಹಾಗೂ ನಗರದ ಹಲವು ಕಡೆ ಸೇವಾ ರಸ್ತೆಯನ್ನು ವ್ಯಾಪಾರಿಗಳು ವರ್ತಕರು ತಾತ್ಕಾಲಿಕವಾಗಿ ಒತ್ತುವರಿ ಮಾಡಿಕೊಂಡಿದ್ದು ಅಪಘಾತಗಳು ಸಂಭವಿಸುತ್ತಾ ಇವೆ ತೆರವುಗೊಳಿಸಬೇಕು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮೇಲುಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ ಎಲ್ಲಾ ಕಡೆ ರಸ್ತೆ ಕಾಮಗಾರಿಗಳನ್ನು ಶ್ರೀಘ್ರವಾಗಿ ಪೂರ್ಣಗೊಳಿಸಿ ಅವಶ್ಯಕತೆ ಇರುವ ಕಡೆ ಸರ್ವಿಸ್ ರಸ್ತೆ ಮಾಡಬೇಕು ಎಂದರು

ಜಿಲ್ಲೆಯಾದ್ಯಂತ ಇರುವ ಬ್ಲಾಕ್ ಸ್ಪಾಟ್ ಸ್ಥಳಗಳಲ್ಲಿ ರಸ್ತೆ ಸುರಕ್ಷತೆಗಳನ್ನು ಅಳವಡಿಸುವುದರಿಂದ ಅಪಘಾತಗಳನ್ನು ತಡೆಯಬಹುದಾಗಿದೆ ಅಪಘಾತಗಳು ಆಗದೇ ಇರುವ ಸ್ಥಳಗಳಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿದ್ದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮಡೇರಹಳ್ಳಿಯಲ್ಲಿ ಅಪಘಾತ ಪ್ರದೇಶವಾಗಿದ್ದು ಅಗತ್ಯ ಸುರಕ್ಷಿತ ಕ್ರಮಗಳನ್ನು ಅಳವಡಿಸಿ. ಅರಭಿಕೊತ್ತನೂರು ಅಂಡರ್ ಪಾಸ್ ನಲ್ಲಿ ನೀರು ನಿಂತುಕೊಳ್ಳುತ್ತದೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಅಪಘಾತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳನ್ನು ಹೆಚ್ಚಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಗದೀಶ್ ಗೆ ಸೂಚಿಸಿದರು.

ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು ಯಾವ ಪ್ರದೇಶದಲ್ಲಿ ರಸ್ತೆ ಒತ್ತುವರಿ ನಡೆದಿದೆ ಅದನ್ನು ಪರಿಶೀಲನೆ ನಡೆಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಎನ್.ಎಮ್. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್, ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಯೋನಕೇಶಪ್ಪ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Donate Janashakthi Media

Leave a Reply

Your email address will not be published. Required fields are marked *