ಡಿಕೇಶಿ ಡೀಲ್ ಗಿರಾಕಿ” ಬಾಯಿತಪ್ಪಿ ಮಾತಾಡಿದ್ರಾ? ಇಲ್ಲವೇ ಸತ್ಯವನ್ನೆ ನುಡಿದ್ರಾ ಕಾಂಗ್ರೆಸ್ ನಾಯಕರು?!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್ ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ, ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ಪತ್ರಿಕಾಗೋಷ್ಠಿಯ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ.

ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿಯನ್ನೆಬ್ಬಿಸಿದೆ. ಸಧ್ಯ ಆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಅವರು ಹೇಳಿದ್ದಾರೆ. ಮಾತ್ರವಲ್ಲ, ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ಸ್​ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯೂ ಸಂಭಾಷಣೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​ ಪಾಳಯದಲ್ಲಿ ಹೊಸ ಅಲೆಯನ್ನ ಸೃಷ್ಟಿಸಿದೆ. ಕಳೆದ ಒಂದು ವಾರದ ಹಿಂದೆ ರಾಜ್ಯದಲ್ಲಿ ಐಟಿ ದಾಳಿ ನಡೆದಿತ್ತು. ಈ ಸಂಬಂಧ ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್​​ ಸುದ್ದಿಗೋಷ್ಠಿ ಕರೆದಿತ್ತು. ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಇಬ್ಬರು ನಾಯಕರು ಈ ರೀತಿ ಮಾತನಾಡಿರುವುದು ವಿಡಿಯೋದಲ್ಲಿದೆ.

ಸಲಿಂ ಉಚ್ಚಾಟನೆ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ರವರು ತಿಳಿಸಿದ್ದಾರೆ.

ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಲೀಂ ಅಹ್ಮದ್ ರವರು ತಿಳಿಸಿದ್ದಾರೆ.

ಬಿಜೆಪಿ ವ್ಯಂಗ್ಯ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ ವಿ ಎಸ್ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ? ಎಂದು ಪ್ರಶ್ನೆ ಮಾಡಿದೆ.

ಮುಖ್ಯಮಂತ್ರಿಯಾಗುವ ನಿಮ್ಮ ಕನಸಿಗೆ ನಿಮ್ಮದೇ ಪಕ್ಷದ ನಾಯಕರು ಎಳ್ಳು ನೀರು ಬಿಡುತ್ತಿದ್ದಾರೆ. ನಿಮ್ಮ ಅಧ್ಯಕ್ಷಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ವಪಕ್ಷೀಯರೇ ಷರಾ ಬರೆದಿಟ್ಟಿದ್ದಾರೆ. ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ “ಡಿಕೆಶಿ ಪದಚ್ಯುತಿ” ಎಂಬ ಮಾಸ್ಟರ್‌ ಪ್ಲ್ಯಾನ್‌ನ ಭಾಗವೇ? ಎಂದು ವ್ಯಂಗ್ಯವಾಡಿದೆ.

 

ಈ ಹೇಳಿಕೆ ನನಗೆ ಸಂಬಂಧವಿಲ್ಲ : ಸಲೀಂ ಮತ್ತು ವಿ ಎಸ್ ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಲೀಂ-ಉಗ್ರಪ್ಪನವರ ಸಂಭಾಷಣೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ಪಕ್ಷಕ್ಕೆ ಮತ್ತು ನನಗೆ ಖಂಡಿತಾ ಮುಜುಗರವಾಗಿದೆ.

ಅದಕ್ಕೇ ಇವತ್ತು ನಾನು ಮಾಧ್ಯಮಗಳ ಮುಂದೆ ಬಂದು ಕುಳಿತಿರುವುದು. ನಾನು ಪಕ್ಷದಲ್ಲಿ ಅಶಿಸ್ತು, ಗುಂಪುಗಾರಿಕೆಯನ್ನು ಸಹಿಸುವುದಿಲ್ಲ, ನಾನು ಅದನ್ನು ಪ್ರೋತ್ಸಾಹಿಸುವುದೂ ಇಲ್ಲ. ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ನಾನು ಯಾವ ಪರ್ಸೆಂಟೇಜ್ ನಲ್ಲಿ ಭಾಗಿಯಾಗಿಲ್ಲ, ಭ್ರಷ್ಟಾಚಾರಕ್ಕೂ ನನಗೂ ದೂರ, ಪರ್ಸೆಂಟೇಜ್ ತೆಗೆದುಕೊಳ್ಳುವ ಅಗತ್ಯ ನನಗಿಲ್ಲ. ರಾಜಕಾರಣದಲ್ಲಿ ಹಾರ ಹಾಕಿ ಸನ್ಮಾನ ಮಾಡುವವರಿರುತ್ತಾರೆ, ಹೊಗಳುವವರು, ತೆಗಳುವವರು, ಜೈಕಾರ ಹಾಕುವವರು, ಇಲ್ಲಿ ಕಲ್ಲು, ಚಪ್ಪಲಿ, ಮೊಟ್ಟೆ ಎಸೆಯುವವರೂ ಇರುತ್ತಾರೆ, ನಾವು ರಾಜಕಾರಣದಲ್ಲಿ ಎಲ್ಲವನ್ನೂ ಸ್ವೀಕರಿಸಲು ಸಿದ್ಧರಾಗಿರಬೇಕು ಎಂದಾಗ ಹಾಗಾದರೆ ಇವರು ಯಾವ ವರ್ಗಕ್ಕೆ ಸೇರಿದವರು ಎಂದಾಗ ಅದನ್ನು ನೀವೇ ನಿರ್ಧಾರ ಮಾಡಿ ಎಂದರು.

 

 

Donate Janashakthi Media

Leave a Reply

Your email address will not be published. Required fields are marked *