ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ ಪುಟ್ಟಣ್ಣ

  • ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದಪುಟ್ಟಣ್ಣ

ಬೆಂಗಳೂರು: ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಪುಟ್ಟಣ್ಣ ಗೆಲುವು ಕಂಡಿದ್ದಾರೆ.

ಈ ಹಿಂದೆ ಇದೇ ಕ್ಷೇತ್ರದಿಂದ ಅವರು ಮೂರು ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ಪಕ್ಷಾಂತರಗೊಂಡು ಬಿಜೆಪಿಯಿಂದ ಕಣಕ್ಕಿಳಿದಿದ್ದು, ನಾಲ್ಕನೇ ಬಾರಿ ಜಯಭೇರಿ ಬಾರಿಸಿದ್ದಾರೆ.

ಕ್ಷೇತ್ರದಲ್ಲಿ ಚಲಾವಣೆಯಾದ 13,287 ಕ್ರಮಬದ್ಧ ಮತಗಳಲ್ಲಿ ಪುಟ್ಟಣ ಅವರು ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲೇ 7,445 ಮತಗಳನ್ನು ಪಡೆದಿದ್ದಾರೆ.

ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಒಟ್ಟು ಕ್ರಮಬದ್ಧ ಮತಗಳಲ್ಲಿ ಶೇ 50ಕ್ಕಿಂತ ಒಂದು ಮತ ಹೆಚ್ಚು ಪಡೆಯಬೇಕು. ಈ ಕ್ಷೇತ್ರದಲ್ಲಿ ಗೆಲ್ಲಲು ಪ್ರಥಮ ಪ್ರಾಶಸ್ತ್ಯದಲ್ಲಿ 6,644 ಮತಗಳನ್ನು ಪಡೆಯಬೇಕಿತ್ತು. ಕಾಂಗ್ರೆಸ್‌ನ ಪ್ರವೀಣ್‌ ಪೀಟರ್‌ 782 ಮತಗಳನ್ನು ಪಡೆದರೆ, ಜೆಡಿಎಸ್‌ನ ಎ.ಪಿ. ರಂಗನಾಥ್‌ 5,107 ಮತಗಳನ್ನು ಪಡೆದಿದ್ದಾರೆ. 1,251 ಮತ ಮತಗಳು ತಿರಸ್ಕೃತಗೊಂಡಿವೆ.

Donate Janashakthi Media

Leave a Reply

Your email address will not be published. Required fields are marked *