ಗ್ರೇಟರ್ ಬೆಂಗಳೂರು| ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆ ರಚನೆ; ಶೀಘ್ರದಲ್ಲೇ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆಗಳನ್ನು ರಚಿಸಿ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಜುಲೈ 15ರಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಬೆಂಗಳೂರಿನ ಉತ್ತಮ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿದ್ದು, ಇದರ ಅಡಿಯಲ್ಲಿ 5 ಪಾಲಿಕೆ ರಚಿಸಲಾಗುವುದು. ಈಗಾಗಲೇ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ. ಕೆಲವರು ವಿರೋಧಿಸುತ್ತಿದ್ದಾರೆ. ಆದರೆ ಆಡಳಿತದ ದೃಷ್ಟಿಯಿಂದ 5 ಪಾಲಿಕೆಗಳನ್ನು ರಚಿಸಿ ಶೀಘ್ರವೇ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ಚನ್ನರಾಯಪಟ್ಟಣ ಭೂಸ್ವಾಧೀನ ಹೋರಾಟ ಆರಂಭವಾಗಿದ್ದು ಹೇಗೆ? – ವಿಶ್ಲೇಷಣೆ : ಎಚ್.‌ ಆರ್‌. ನವೀನ್‌ಕುಮಾರ್‌ Janashakthi

Donate Janashakthi Media

Leave a Reply

Your email address will not be published. Required fields are marked *