ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಕೂಡಲೇ ಒದಗಿಸಬೇಕು :ಸಿಎಂ ಸಿದ್ದರಾಮಯ್ಯ

ಮೈಸೂರು: ಆತ್ಮಹತ್ಯೆ ಮಾಡಿಕೊಂಡ ಪ್ರತಿ ರೈತರ ಕುಟುಂಬಕ್ಕೂ ಪರಿಹಾರವನ್ನು ಕೂಡಲೇ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮೈಸೂರಿನಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಇಲ್ಲಿನ ಆತ್ಮಹತ್ಯಗೆ ಪರಿಹಾರ ಕೊಡುವ ವಿಷಯದಲ್ಲಿ ಉದಾರವಾಗಿಬೇಕು ಸರ್ಕಾರ ಕೊಡುತ್ತದಯೇ ಹೊರತು  ನೀವಲ್ಲ.ತಕ್ಷಣ ನೀಡಬೇಕು,ಅನಗತ್ಯವಾಗಿ ವಿಳಂಬ ಮಾಡಬಾರದು.5ಲಕ್ಷ ಪರಿಹಾರವನ್ನು ಕೂಡಲೇ ಕೊಡಬೇಕು.ಯಾರಿಗೂ ತಪ್ಪಿಸಬಾರದು.ಎಲ್ಲ ಕುಟುಂಬಕ್ಕೂ ಒದಗಿಸಬೇಕು ಎಂದು ಸೂಚಿಸಿದರು.

ಯಾವ ರೈತರೂ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ.ಅವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ವಹಿಸಬೇಕು. ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.ಅಧಿಕಾರಿಗಳ ನಿರ್ಲಕ್ಷ್ಯದಿಂದ ಸತ್ತಿದ್ದರೆ ಸಂಬಂಧಿಸಿದವರ ಮೇಲೂ ಕ್ರಮ ಜರುಗಿಸಬೇಕು.ಆತ್ಮಹತ್ಯೆಗೆ ಕಾರಣವೇನೂ ಎನ್ನುವುದನ್ನೂ ತಿಳಿದುಕೊಳ್ಳಬೇಕು. ಕಾರಣವಾದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಬೇಕು.ರೈತರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ:ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಆಗಸ್ಟ್‌ 30ಕ್ಕೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಯಾವ ಜಿಲ್ಲೆಗಳಲ್ಲಿ ಬರಗಾಲ ಉಂಟಾಗಿದೆ ಎಂದು ಘೋಷಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ತಂಡ ಬಂದು ಪರೀಕ್ಷಿಸಿದ ನಂತರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ನೀಡುವ ಕ್ರಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಶಾಸಕರಾದ ತನ್ವೀರ್‌ ಸೇಠ್‌, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಟಿ.ಎಸ್‌.ವಿಶ್ವನಾಥ್‌, ಜಿ.ಡಿ. ಹರೀಶ್‌ ಗೌಡ, ಡಾ.ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಸಿ.ಎನ್‌ ಮುಂಜೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹಾಗೂ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್‌ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *