ಕರ್ತವ್ಯ ಲೋಪ: 5 ಪೊಲೀಸ್ ಸಿಬ್ಬಂದಿಗಳು ಅಮಾನತು

ಬೆಂಗಳೂರು: ಹಲಸೂರು ಗೇಟ್ ಠಾಣೆಯ ಇನ್ಸ್‌ ಪೆಕ್ಟರ್ ಹನುಮಂತ ಭಜಂತ್ರಿ ಹಾಗೂ ಕೋರಮಂಗಲ ಠಾಣೆಯ ಇನ್ಸ್‌ ಪೆಕ್ಟರ್ ಲೂಯಿರಾಮ ರೆಡ್ಡಿ ಸಹಿತ ಐವರು ಸಿಬ್ಬಂದಿಗಳನ್ನು ಲಂಚಕ್ಕೆ ಬೇಡಿಕೆ ಇಟ್ಟು ಕರ್ತವ್ಯ ಲೋಪ ಎಸಗಿದ ಆರೋಪದಡಿ ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೆಪ್ಟೆಂಬರ್‌ 23ರಂದು ಆದೇಶಿಸಿದ್ದಾರೆ. ಕರ್ತವ್ಯ

ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂ. ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ, ಹಲಸೂರು ಗೇಟ್ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಎಸ್‍ಐ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಪ್ರಕರಣ: ತನಿಖೆಯನ್ನು ಸಿಐಡಿಗೆ ವಹಿಸುವ ಚರ್ಚೆಯಾಗಿಲ್ಲ: ಡಾ. ಜಿ. ಪರಮೇಶ್ವರ್

ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್‍ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಡಿ ಕೋರಮಂಗಲ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಆಗ್ನೆಯ ವಿಭಾಗ ಹಾಗೂ ಕೇಂದ್ರ ವಿಭಾಗದ ಡಿಸಿಪಿಯವರ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ನೋಡಿ: ಧರ್ಮಸ್ಥಳ :ಅಧಿಕ ಬಡ್ಡಿ, ಸಾಲ ವಸೂಲಿ ನೆಪದಲ್ಲಿ ಕಿರುಕುಳ : ನೂರಾರು ಜನರು ಆತ್ಮಹತ್ಯೆ – ಜಯಂತ್ ಟಿ

Donate Janashakthi Media

Leave a Reply

Your email address will not be published. Required fields are marked *