ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಈ ಬಗ್ಗೆ ಇಂದು ವಿಕಾಸಸೌಧದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ಹಲವು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ್ದರು. ಅಲ್ಲದೇ ಮನವಿ ಮಾಡಿದ್ದರು. ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದರು. ವೇತನ

ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. 60 ವರ್ಷ ಪೂರೈಸಿದಂತ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೇ ನೌಕರರಿಗೆ ಆರೋಗ್ಯ ವಿಮಾ ಯೋಜನೆ ಕೂಡ ಜಾರಿಗೊಳಿಸಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದರು.

ಇದನ್ನು ಓದಿ : ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ‘ಸಂಪುಟ ದರ್ಜೆ ಸ್ಥಾನಮಾನ’

ವೇತನ ಹೆಚ್ಚಳ, ಹುದ್ದೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

ವಿಡಿಯೊ ನೋಡಿ: ಕುವೆಂಪು ಚಿಂತನೆಯಲ್ಲಿ ಮಹಿಳೆ – ಪಿ. ಭಾರತೀದೇವಿ ಅಭಿಮತ Janashakthi Media

 

Donate Janashakthi Media

Leave a Reply

Your email address will not be published. Required fields are marked *