ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಸೋಮವಾರದಂದು ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಐದು ವರ್ಷದ ಬಾಲಕಿ ಮೇಲೆ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ.
ಇದನ್ನೂ ಓದಿ: ಮುಖ್ಯಮಂತ್ರಿ ಹುದ್ದೆ ಬಗ್ಗೆ ಗೊಂದಲವೇನೂ ಇಲ್ಲ; ಸಚಿವ ಎಂ.ಬಿ. ಪಾಟೀಲ್
ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ. ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಸವಿತಕ್ಕ ಜೊತೆ ಸಂಕ್ರಾಂತಿ ಸುಗ್ಗಿ ಹಾಡು, ಒಂದಿಷ್ಟು ಮಾತುJanashakthi Media