ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆದ ಹೋರಾಟಕ್ಕೆ 50 ದಿನ ಪೂರ್ಣ

ವಿಜಯಪುರ:  ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂದು ಆಗ್ರಹಿಸಿ ಬಿಸಿಲು, ಮಳೆಯನ್ನು ಲೆಕ್ಕಿಸದೇ ವಿಜಯಪುರದಲ್ಲಿ ನಡೆಯುತ್ತಿರುವ ಧರಣಿ 50 ದಿನ ಪೂರೈಸಿದೆ.  ಖಾಸಗಿ–ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ) ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ಆದರೆ, ಇದುವರೆಗೂ ಜಿಲ್ಲೆಯ ಸಚಿವರು, ಶಾಸಕರಿಂದ ಕೇವಲ ಬಾಯಿ ಮಾತಿನ ಭರವಸೆಗಳು ಸಿಕ್ಕಿವೆಯೇ ಹೊರತು, ಸರ್ಕಾರದಿಂದ ಅಧಿಕೃತ ಘೋಷಣೆಯಾಗಿಲ್ಲ. ವಿಜಯಪುರ

ಇದನ್ನೂ ಓದಿ : ಮುಂಬೈ | ಹೊಸ ಕಟ್ಟಡವು ದುಂದುವೆಚ್ಚದಿಂದ ಮುಕ್ತವಾಗಬೇಕು -ಸಿಜೆಐ ಗವಾಯಿ

ವಿದ್ಯಾರ್ಥಿ, ಯುವ ಸಂಘಟನೆಗಳು, ರೈತರು, ಅಂಗವಿಕಲರು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು, ಟ್ರೇಡ್‌ ಯೂನಿಯನ್‌, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು  ಧರಣಿಯಲ್ಲಿ ಪಾಲ್ಗೊಂಡು ಬೆಂಬಲಿಸಿದರೂ ಸರ್ಕಾರ ಕಿವಿಗೊಡುತ್ತಿಲ್ಲ. ವಿಜಯಪುರ

ಜಿಲ್ಲೆಗೆ ಸಂಬಂಧಿಸಿದಂತೆ ಈ ಹಿಂದೆ ಯಾವುದೇ ಜನಪರ ವಿಷಯವಾಗಿ ಎಡ, ಬಲ, ದಲಿತ, ರೈತ, ಮಹಿಳಾ, ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಒಂದಾಗಿ ಪ್ರತಿಭಟನೆ ನಡೆಸಿರಲಿಲ್ಲ. ಇದೇ ಮೊದಲ ಬಾರಿಗೆ ತಮ್ಮ ವಿಚಾರಬೇಧವನ್ನು ಮರೆತು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ರಚಿಸಿಕೊಂಡು ರಾಜಿ ರಹಿತ ಹೋರಾಟ ನಡೆಸುತ್ತಿದ್ದಾರೆ.

ಪಂಜಿನ ಮೆರವಣಿಗೆ, ರಕ್ತ ಸಹಿ ಸಂಗ್ರಹ, ಪತ್ರ ಚಳವಳಿ, ಮಾನವ ಸರಪಳಿ ನಿರ್ಮಿಸಿ ಪರಿಪರಿಯಾಗಿ ಬೇಡಿಕೊಂಡರೂ ರಾಜ್ಯ ಸರ್ಕಾರ ಇದುವರೆಗೂ ಹೋರಾಟಕ್ಕೆ ಸ್ಪಂದಿಸಿಲ್ಲ.ಜಿಲ್ಲೆಯ ಕವಿಗಳು ಹೋರಾಟ ಸ್ಥಳದಲ್ಲೇ ಕವಿಗೋಷ್ಠಿ ನಡೆಸಿದರು, ಸಂಗೀತ ಕಲಾವಿದರು ಕ್ರಾಂತಿ ಗೀತೆ ಹಾಡಿದರು, ಬುಡಕಟ್ಟು ಸಮುದಾಯದವರು ವೇಷಭೂಷಣ ತೊಟ್ಟು ಬೆಂಬಲಿಸಿದರು.

ಜಿಲ್ಲೆಯ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕಧೋಂಡ, ರಾಜುಗೌಡ ಪಾಟೀಲ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಮಾಜಿ ಶಾಸಕರು ಧರಣಿ ಸ್ಥಳಕ್ಕೆ ಭೇಟಿ ನೀಡಿ, ಭಾಷಣ ಮಾಡಿ, ಭರವಸೆ ನೀಡಿ ಹೋಗಿದ್ದಾರೆ. ಆದರೂ ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ.

ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಲಬುರ್ಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜಿಲ್ಲೆಯವರೇ ಆದ ಸಚಿವ ಶಿವಾನಂದ ಪಾಟೀಲರನ್ನು ಭೇಟಿಯಾಗಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹಕ್ಕೊತ್ತಾಯ ಮಾಡಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಜನಪರ ಹೋರಾಟವನ್ನು ಜಿಲ್ಲೆಯ ಸಚಿವರು, ಶಾಸಕರು ಲಘುವಾಗಿ ಪರಿಗಣಿಸಿರುವುದು ಅವರ ಇಚ್ಛಾಶಕ್ತಿ ಕೊರತೆ, ಜನಹಿತ ಮರೆತ ಸ್ವಾರ್ಥ ರಾಜಕಾರಣವನ್ನು ಅನಾವರಣ ಮಾಡಿದೆ. ಇನ್ನಾದರೂ ಜಿಲ್ಲೆಯ ಜನಪ್ರತಿನಿಧಿಗಳು ಕಣ್ತೆರೆಯಬೇಕು, ಹೋರಾಟದ ಆಶಯಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಜನರು ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದು ಖಚಿತ ಎಂದು ಎಚರಿಸಿದರು.

ಇದನ್ನೂ ನೋಡಿ : ವಚನಾನುಭವ 33 | ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ Janashakthi Media

Donate Janashakthi Media

Leave a Reply

Your email address will not be published. Required fields are marked *