ಕೆಆರ್‌ಎಸ್ ಡ್ಯಾಂ ಭರ್ತಿ; 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದ್ದು, ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ಕೆಆರ್‌ಎಸ್ ಡ್ಯಾಂನಿಂದ ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯ ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೊಲೆ ಪ್ರಕರಣ | ಸರ್ಕಾರ ಮತ್ತು ವಿಪಕ್ಷ ನಾಯಕರ ಹೇಳಿಕೆಗೆ ಜಾಗೃತ ನಾಗರಿಕರು ಕರ್ನಾಟಕ ಆಕ್ಷೇಪ

ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಮಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದ್ದು, ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳ | ಪಂಚಾಯಿತಿಯಲ್ಲಿ ದಾಖಲೆಗಳನ್ನು ಸುಟ್ಟು ಹಾಕಿರಬಹುದು. ಆದರೆ ನ್ಯಾಯಾಲಯದಲ್ಲಿ ದಾಖಲೆಗಳು ಇವೆ – ಜಯನ್

Donate Janashakthi Media

Leave a Reply

Your email address will not be published. Required fields are marked *