ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರಕ್ಕೆ ಮಂಗಳವಾರ ಸೆ-5 ಇಂಧನ ಸಚಿವ ಕೆ.ಜೆ.ಜಾರ್ಜ್ ಲೋಕಾರ್ಪಣೆ ಮಾಡಿದರು.
ಬೆಳಿಗ್ಗೆ 11 ಗಂಟೆಗೆ 15ನೇ ಅಡ್ಡ ರಸ್ತೆ, ಮಲ್ಲೇಶ್ವರಂ ವಿಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ:ಆಗಸ್ಟ್ 5ಕ್ಕೆ ಗೃಹ ಜ್ಯೋತಿಗೆ ಸಿಎಂ ಚಾಲನೆ : ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್- ಸಚಿವ ಕೆ.ಜೆ ಜಾರ್ಜ್
ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರಡಿ ಬೆಸ್ಕಾಂ 1.33 ಕೋಟಿ ರೂ. ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ. ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಎಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಸಿವಿಲ್ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.
ಅಲ್ಲದೇ ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್’ಗಳು, ಫಿಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ.