ವೇತನ ಹೆಚ್ಚಳಕ್ಕಾಗಿ ಪೌರ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು: ಕನಿಷ್ಠ ವೇತನ ಹೆಚ್ಚಳ, ಕೆಲಸ ಕಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಪೌರ ಕಾರ್ಮಿಕರು ಎಐಸಿಸಿಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೆಶೀಸಿ ಸಂಘಟನೆಯ ಪ್ರಮುಖರಾದ ನಿರ್ಮಲಾ ಮಾತನಾಡುತ್ತಾ, ‘₹35 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. ಘನತೆಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಬೇಕು. ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರ ಕಾರ್ಮಿಕರಿಗೆ ಉಚಿತ ವಸತಿ ಮತ್ತು ಅವರ ಮಕ್ಕಳಿಗೆ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ರಸ್ತೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಬಡಾವಣೆಗಳ ಮನೆಯವರು, ಅಂಗಡಿಯವರು ಮತ್ತು ಬಿಬಿಎಂಪಿ ಅಧಿಕಾರಿಗಳು ಪೌರ ಕಾರ್ಮಿಕರನ್ನು ಕೇವಲವಾಗಿ ಕಾಣುತ್ತಿದ್ದಾರೆ. ಕಾರ್ಮಿಕರ ಜತೆ ಮರ್ಯಾದೆಯಿಂದ ಮಾತನಾಡುವ ರೀತಿಯಲ್ಲಿ ಘನತೆ ಹೆಚ್ಚಿಸಲು ಕೆಲಸವನ್ನು ಬಿಬಿಎಂಪಿ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಬಹುತೇಕ ಪೌರ ಕಾರ್ಮಿಕರು ಮಹಿಳೆಯರೇ ಆಗಿದ್ದು, ದಲಿತ ಸಮುದಾಯಕ್ಕೆ ಸೇರಿದವರೇ ಆಗಿದ್ದಾರೆ. ನಮ್ಮನ್ನು ಕೀಳಾಗಿ ಕಾಣುವುದು ಸಹಜವಾಗಿದೆ. ಲೈಂಗಿಕ ಕಿರುಕುಳ, ಜಾತಿ ದೌರ್ಜನ್ಯ ತಪ್ಪಿಲ್ಲ’ ಎಂದು ವಕೀಲರಾದ ಮೈತ್ರೇಯಿ ಕೃಷ್ಣನ್ ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರು, ಶೌಚಾಲಯ, ಸುರಕ್ಷತಾ ಸಲಕರಣೆ ಒದಗಿಸದೆ ಕಾರ್ಮಿಕರು ಘನತೆಯಿಂದ ಕೆಲಸ ಮಾಡುವ ವಾತಾವರಣ ಕಲ್ಪಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಆರೋಪಿಸಿದರು. ಕಾರ್ಮಿಕರ ಮನವಿ ಸ್ವೀಕರಿಸಿದ ವಲಯ ಜಂಟಿ ಆಯುಕ್ತೆ ಶಿಲ್ಪಾ ಅವರು, ಪೌರ ಕಾರ್ಮಿಕರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು

Donate Janashakthi Media

Leave a Reply

Your email address will not be published. Required fields are marked *