ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ

ಬೆಂಗಳೂರು :  ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಪ್ರಸಕ್ತ ಸಾಲಿನಿಂದ ಹೊಸ ಕೋರ್ಸ್ಗೆ ಸೇರಲು ಅವಕಾಶ ನೀಡಲಾಗುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಯಾವ ಕೋರ್ಸ್ ಗಳು ಸೇರ್ಪಡೆ
1) 2 ವರ್ಷದ ಕೋರ್ಸ್ಗಳಾದ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್, ( 2 ವರ್ಷ) 
2) ಬೇಸಿಕ್ಸ್ ಆಫ್ ಡಿಸೈನ್ ಮತ್ತು ವರ್ಚುಯಲ್ ವೆರಿಫಿಕೇಷನ್, (2ವರ್ಷ)
3) 1 ವರ್ಷದ ಕೋರ್ಸ್ಗಳಾದ ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ (1 ವರ್ಷ)
4) ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ)
5) ಇಂಡಸ್ಟ್ರಿಯಲ್ ರೊಬೊಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರ್ (1 ವರ್ಷ) 
6) ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ ಕೋರ್ಸ್ (1 ವರ್ಷ)

‘ಹೊಸ ಕೋರ್ಸ್‌ಗಳಿಗೆ ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ (ಎನ್.ಸಿ.ವಿ.ಇ.ಟಿ.) ಮಾನ್ಯತೆ ಸಿಗಬೇಕಿದೆ. ಇವುಗಳ ಪಠ್ಯಕ್ರಮಕ್ಕೆ ನವದೆಹಲಿಯ ತರಬೇತಿ ಮಹಾನಿರ್ದೇಶನಾಲಯದಿಂದ (ಡಿ.ಜಿ.ಟಿ.) ಅನುಮೋದನೆ ಪಡೆಯಬೇಕಿದೆ. ಪಠ್ಯಕ್ರಮವನ್ನು ಈಗಾಗಲೇ ಡಿ.ಜಿ.ಟಿ.ಗೆ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಎನ್.ಸಿ.ವಿ.ಇ.ಟಿ.ಯಿಂದ ಮಾನ್ಯತೆ ಪಡೆಯುವ ಷರತ್ತಿಗೆ ಒಳಪಟ್ಟು ಈನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದೂ ಹೇಳಿದ್ದಾರೆ.

’23 ಅಲ್ಪಾವಧಿ (3 ತಿಂಗಳು) ಸರ್ಟಿಫೈಡ್‌ ಕೋರ್ಸ್‌ಗಳ ಆರಂಭಕ್ಕೂ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ’ ಎಂದು ತಿಳಿಸಿದ್ದಾರೆ.

ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಕೆ.ಹರೀಶ್ ಕುಮಾರ್ ಇದ್ದರು.

Donate Janashakthi Media

Leave a Reply

Your email address will not be published. Required fields are marked *