ಬೆಂಗಳೂರು : ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಕನಾರ್ಟಕ ತತ್ತರಿಸಿ ಹೋಗಿದೆ . ಮಳೆಯ ರೌದ್ರನರ್ತನಕ್ಕೆ ಜನ ಅಕ್ಷರಶ ನಲುಗಿ ಹೋಗಿದ್ದಾರೆ.. ಇನ್ನು ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ನವೆಂಬರ್ 20 ರವೆರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ ಸೇರಿದಂತೆ ಹಲವೆಡೆ ಮಳೆಯಿಂದಾದ ಅವಾಂತರಗಳು ಅಷ್ಟಿಷ್ಟಲ್ಲ. ಮಳೆಯ ಅರ್ಭಟಕ್ಕೆ ಮಂಡ್ಯದಲ್ಲಿ ಮನೆಗಳ ಛಾವಣಿ ಕುಸಿದು ಜನ ಪರದಾಡುತ್ತಿದ್ದಾರೆ. ಇತ್ತ ಕೋಲಾರದಲ್ಲಿ ಮಳೆ ನೀರು ಜಮೀನುಗಳಿಗೆ ನುಗ್ಗಿ ರೈತರು ಬೆಳೆದ ಬೆಳೆಗಳು ನೀರು ಪಾಲಾಗಿದೆ. ಬೆಳೆಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಇನ್ನು ಹಲವೆಡೆ ಮಳೆಗೆ ರಸ್ತೆಗಳಂತೂ ಕೆರೆಗಳಾಂತಗಿದೆ. ವಾಹನ ಸವಾರರು ರಸ್ತೆ ದಾಟಲು ಆಗದೆ ಕೆಲ ಕಾಲ ಪರದಾಡಿದ್ದಾರೆ.
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ..
ಬೆಂಗಳೂರಿನಲ್ಲಿ ಮಳೆಯ ಅಬ್ಬರ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಕಳೆದ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಜನ ಪರದಾಡಿದ್ರು. ಇನ್ನು ಬೆಂಗಳೂರಿನಲ್ಲಿ 5 ದಿನ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.
26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೆಚ್‍ಎಎಲ್‍್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.