ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಎರಡು ಫ್ಲ್ಯಾಟ್​ಗಳಿಗೆ ಆವರಿಸಿದ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಅಪಾರ್ಟ್​ಮೆಂಟ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿವಾಸಿಗಳು ಫ್ಲ್ಯಾಟ್​​ನಿಂದ ಓಡಿಬಂದಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ, ಆನೇಕಲ್ ತಾಲೂಕಿನ ಸಂಪಿಗೆ ನಗರದ ವಸುಂಧರಾ ಲೇಔಟ್​ನ ವಿ ಮ್ಯಾಕ್ಸ್ ಚಾಲೇಟ್​ನಲ್ಲಿ ಎರಡು ಫ್ಲ್ಯಾಟ್​​ಗಳಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಮಡುಗಟ್ಟಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗ್ಯಾಸ್​ ಸೋರಿಕೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಇತ್ತೀಚೆಗೆ ನಗರದ ಅಪಾರ್ಟ್‌ಮೆಂಟ್‌ವೊಂದರ ಬಾಲ್ಕನಿಯಲ್ಲಿ ಮಹಿಳೆಯೊಬ್ಬರು ಬೆಂಕಿಯಲ್ಲಿ ಸಜೀವವಾಗಿ ಉರಿದುಹೋದ ಘಟನೆ ನಡೆದಿತ್ತು. ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಈ ಬೆನ್ನಲ್ಲೆ ಈಗ ಮತ್ತೊಂದು ಅವಘಡ ಸಂಭವಿಸಿದೆ.

Donate Janashakthi Media

Leave a Reply

Your email address will not be published. Required fields are marked *