ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪರವಾಗಿ ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದ ವಕೀಲ ಶಂಕರಪ್ಪ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಸಿಪಿಐಎಂ ರಾಜ್ಯಕಾರ್ಯದರ್ಶಿ ಯು. ಬಸವರಾಜ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಶಂಕರಪ್ಪರವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ. ಸ್ವಾಮೀಜಿ ಪರ ವಕಾಲತ್ತು ಹಾಕಬಾರದು ಎಂದು ಅವರಿಗೆ ಸೂಚನೆ ನೀಡಲಾಗಿತ್ತು. ಸೂಚನೆಯನ್ನು ಉಲ್ಲಂಘಿಸಿದ ಕಾರಣ ಅವರನ್ನು ಉಚ್ಚಾಟಿಸುವ ನಿರ್ಧಾರಕ್ಕೆ ಬರಲಾಯಿತು ಎಂದು ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪರವಾಗಿ ಕೋರ್ಟಿನಲ್ಲಿ ವಕಾಲತ್ತು ವಹಿಸುವುದು ಸರಿಯಾದ ವಿಧಾನ ಇಲ್ಲ. ಈ ವಿಚಾರದಲ್ಲಿ ಮಕ್ಕಳಪರ ನಿಲ್ಲಬೇಕಾಗಿದ್ದ ಇವರು, ಪಕ್ಷದ ಆಶಯವನ್ನುಗಾಳಿಗೆ ತೂರಿ ಅರೊಪಿ ಪರ ವಕಾಲತ್ತು ವಹಿಸಲು ಮುಂದಾಗಿದ್ದನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದ ತತ್ವ ಸಿದ್ದಾಂತಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರು ಎಷ್ಟೆ ದೊಡ್ಡವಿರಿದ್ದರು ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ ಎಂದು ಯು. ಬಸವರಾಜ್ ತಿಳಿಸಿದ್ದಾರೆ.