ಆರು ಎಂಜಿನಿಯರಿಂಗ್‌ ಕಾಲೇಜು ಮುಚ್ಚಲು ವಿಟಿಯು ಆದೇಶ

ಬೆಳಗಾವಿ: ಮೂಲಸೌಕರ್ಯ ಕೊರತೆ, ಸೀಟುಗಳು ಭರ್ತಿಯಾಗದಿರುವುದು, ಕಫೆ ಗುಣಟ್ಮಟದ ಬೋಧನೆಯ ಹಿನ್ನೆಲೆಯಲ್ಲಿ ರಾಜ್ಯದ ರಾಜ್ಯದ 6 ಎಂಜಿನಿಯರಿಂಗ್‌ ಕಾಲೇಜುಗಳನ್ನು ಮುಚ್ಚಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಆದೇಶ ನೀಡಿದೆ.

ಇತ್ತೀಚೆಗೆ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾಲೇಜುಗಳನ್ನು ಮುಚ್ಚಬೇಕೆಂದು ಆದೇಶಿಸಿದೆ. ಈ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಸಾರ್ವಜನಿಕ ಪ್ರಕಟಣೆ ನೀಡಿದೆ.

ಪ್ರಸಕ್ತ 2021-22ರ ಶೈಕ್ಷಣಿಕ ವರ್ಷದಿಂದಲೇ ಪ್ರವೇಶ ಪಡೆಯದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಎಚ್ಚರವಹಿಸಬೇಕೆಂದು ವಿಟಿಯು ತಿಳಿಸಿದೆ. ‘ಮೂಲಸೌಕರ್ಯಗಳ ಕೊರತೆ, ಸೀಟುಗಳನ್ನು ತುಂಬುವಲ್ಲಿ ತೊಂದರೆ, ಕಳಪೆ ಗುಣಮಟ್ಟದ ಬೋಧನೆಯ ಹಿನ್ನೆಲೆಯಲ್ಲಿ ಈ ಕಾಲೇಜುಗಳನ್ನು ಮುಚ್ಚಲು ಆದೇಶಿಸಲಾಗಿದೆ’ ಎಂದು ವಿಟಿಯುನ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಆರು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗುವುದು ಎಂದು ವಿಟಿಯು ಹೇಳಿದೆ.

ಮುಚ್ಚಲ್ಪಡುತ್ತಿರುವ ಕಾಲೇಜುಗಳ ವಿವರ

ಬೆಂಗಳೂರಿನ ಆಲ್ಫಾ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಬೆಳಗಾವಿಯ ಶೇಖ್ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಚಾಮರಾಜನಗರದ ಏಕಲವ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ,
ಕೆಜಿಎಫ್‌ನ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಬೆಂಗಳೂರಿನ ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ

Donate Janashakthi Media

Leave a Reply

Your email address will not be published. Required fields are marked *