ಬೆಳಗಾವಿ: ರಾಜ್ಯದಲ್ಲಿ ಆರು ಹೊಸದಾಗಿ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೋಡಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಮಸೂದೆಯನ್ನು ಮಂಡಿಸಲಾಗಿತ್ತು.
ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ.ಜಾನ್ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದಿಂದ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜಿ.ಎಂ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ ಕಿಷ್ಕಿಂದಾ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.
ಇದನ್ನು ಓದಿ: ಫ್ಯಾಸಿಸಂನ್ನು ಹಿಂದುತ್ವಕ್ಕೆ ಹೋಲಿಕೆ ಮಾಡಿದ್ದ ಪ್ರಶ್ನೆ: ಶಾರದಾ ವಿವಿಯ ಉಪನ್ಯಾಸಕ ಅಮಾನತ್ತು
ಅಗ್ನಿ ಶಾಮಕ ತಿದ್ದುಪಡಿ ಮಸೂದೆ 2022
ಯಾವುದೇ ವ್ಯಕ್ತಿ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಗ್ನಿ ಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪ್ರಮಾಣ ಪತ್ರ ಪಡೆಯಬೇಕು ಎಂಬ ಅಂಶವನ್ನು ಮಸೂದೆಗೆ ಸೇರಿಸಲಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ