ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ರಾಜ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದು, ವಿಚಾರವಾಗಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. “ಉಪಚುನಾವಣೆಗೆ ಪುತ್ರನನ್ನು ನಿಲ್ಲಿಸಿದಾಗ 100 ಕೋಟಿ ಖರ್ಚು ಮಾಡಿದರು. 100 ಕೋಟಿ ಹಣವನ್ನು ಆಲುಗಡ್ಡೆ ಬೆಳೆದು ಸಂಪಾದನೆ ಮಾಡಿದ್ರಾ?” ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನೀವು ನಿಂತಾಗ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿದ್ರಿ. ರಾಮನಗರದಲ್ಲೂ ಕೂಡ ಸ್ಪರ್ಧಿಸಿದಾಗ ಕೋಟ್ಯಾಂತರ ಹಣ ಖರ್ಚು ಮಾಡಿದ್ರಿ. ಎಲ್ಲಿಂದ ಬಂತು ಅಷ್ಟು ಹಣ? ಮೊದಲು ಅದನ್ನು ಹೇಳಿ ಎಂದು ಸೋಮಶೇಖರ್ HD ಕುಮಾರಸ್ವಾಮಿಗೆ ಸವಾಲು ಹಾಕಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯಕ್ಕೆ ತೆಗೆದುಕೊಂಡು ಬನ್ನಿ. ವಾರಕ್ಕೆ ಒಂದು ದಿನ ಇಲ್ಲಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಹೋಗುವುದಲ್ಲ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸುಮ್ಮನೆ ಆರೋಪ ಮಾಡುವುದಲ್ಲ. ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ನೋಡಿ : ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಸವಾಲು Janashakthi Media