ಕುಣಿಗಲ್ : ಆಂಗನವಾಡಿ ಕಾರ್ಯಕರ್ತೆಯ ಮೇಲೆ ದೌರ್ಜನ್ಯ ನಡೆಸಿ, ಲೈಂಗಿಕ ಕಿರುಕುಳ ನೀಡಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ ಘಟನೆ ರಾಜಪ್ಪನ ದೊಡ್ಡಿಯಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸಿ. ಕಠಿಣ ಶಿಕ್ಷೆ ನೀಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತುಮಕೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.
ಕುಣಿಗಲ್ ತಾಲ್ಲುಕು ಹುಲಿಯೂರುದುರ್ಗ ಹೋಬಳಿ ವ್ಯಾಪ್ತಿಯ ರಾಜಪ್ಪನ ದೊಡ್ಡಿ ಯಲ್ಲಿ ಮೇ 05 ರಂದು ಅಂಗನವಾಡಿ ಕಾರ್ಯಕರ್ತೆ ಮನೆಗೆ ಹಿಂದಿರುಗುವ ವೇಳೆ ಅವರ ಮೇಲೆ ಅತ್ಯಚಾರಕ್ಕೆ ಯತ್ನಿಸಿದ್ದು, ಅವರ ಬಳಿ ಇದ್ದ ಮೋಬೈಲ್ ಪೋನ್, ಕತ್ತಿನಲ್ಲಿ ಇದ್ದ ಚಿನ್ನದ ಸರ ಕಿತ್ತು, ಕೊಲೆಗೆ ಯತ್ನಸಲಾಗಿದೆ. ಈ ಕುರಿತು ಸಂತ್ರಸ್ತೆ ದೂರು ದಾಖಲಿಸಿದ್ದು, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ.
ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಅಂಗನವಾಡಿ ನೌಕರರ ಸಂಘಟನೆಯ ಜಿಲ್ಲಾಧ್ಯಕ್ಷೆ ಜಿ.ಕಮಲಾ, ಜಿಲ್ಲಾ ಪ್ರಧಾನ ಕಾರ್ಯಧರ್ಶಿಗಳಾದ ಗುಲ್ಜಾರ್ ಭಾನು ರವರು ಭೇಟಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ನಂತರ ಮಾಧ್ಯಮಗಳ ಜೊತೆ ಜಂಟಿಯಾಗಿ ಮಾತನಾಡಿದ ಇವರು, ನಿರಂತರವಾಗಿ ಜಿಲ್ಲೆಯಲ್ಲಿ ಅಂಗನವಾಡಿ ನೌಕರರ ಮೇಲೆ ಇತ್ತಿಚೆಗೆ ದೌರ್ಜನ್ಯಯದ ಪ್ರಕರಣಗಳು ಹೆಚ್ಚುತ್ತಿವೆ. ಆ ಪ್ರಕರಣಗಳ ಕುರಿತು ಆರೋಪಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿತ್ತು. ಆದರೂ ಪೊಲೀಸ್ ಇಲಾಖೆ ಯಾವುದೆ ಕ್ರಮ ಜರುಗಿಸಿಲ್ಲ. ಈ ಕಾರಣದಿಂದಾಗಿಯೆ ಮತ್ತೊಂದು ದುರಂತ ನಡೆದಿದೆ. ಕೂಡಲೆ ಅಪರಾಧಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯ ಜೊತೆಗೆ ಪೋಲಿಸರು ಅಸಮಂಜಸ ಪ್ರಶ್ನೆಗಳನ್ನು ಕೇಳುವ ಮೂಲಕ ಪ್ರಕರಣದ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಪೊಲೀಸರ ಈ ವರ್ತನೆ ಸರಿಯಾದುದಲ್ಲ. ಈ ಪ್ರಕರಣದಲ್ಲಿ ನೊಂದಿರುವ ಮಹಿಳೆಗೆ ಸೂಕ್ತ ರಕ್ಷಣೆಯನ್ನು ನಿಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆ (ಸಿಐಟಿಯು) ಆಗ್ರಹಿಸಿದೆ.