ಶಕ್ತಿ ಯೋಜನೆ | ಶತದಿನಗಳಲ್ಲಿ 62 ಕೋಟಿ ಮಹಿಳೆಯರು ಉಚಿತ ಪ್ರಯಾಣ!

ವರದಿ : ಶಶಿಕುಮಾರ.ಕೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ ನೂರು ದಿನ ಪೂರೈಸಿದ್ದು, ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಬರೋಬ್ಬರಿ 62 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಜೂನ್‌ 11ರಿಂದ ಸೆಪ್ಟೆಂಬರ್‌ 18ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್‌.ಆರ್‌.ಟಿ.ಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿ.ಎಂ.ಟಿ.ಸಿ) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಒಟ್ಟು ಟಿಕೆಟ್‌ ಮೌಲ್ಯ ₹1,442 ಕೋಟಿ.

ಜೂನ್‌ನಲ್ಲಿ 10.54 ಕೋಟಿ ಮಹಿಳಾ ಪ್ರಯಾಣಿಕರಿಂದ ₹248 ಕೋಟಿ, ಜುಲೈನಲ್ಲಿ 19.63 ಕೋಟಿ ಮಹಿಳಾ ಪ್ರಯಾಣಿಕರಿಂದ ₹453 ಕೋಟಿ ಮತ್ತು ಆಗಸ್ಟ್‌ನಲ್ಲಿ ₹20.03 ಕೋಟಿ ಮಹಿಳಾ ಪ್ರಯಾಣಿಕರಿಂದ ₹459 ಕೋಟಿ ಟಿಕೆಟ್‌ ಮೌಲ್ಯವನ್ನು ಅಂದಾಜಿಸಲಾಗಿದೆ.

ಇದನ್ನೂ ಓದಿ:ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದು: ರಾಜ್ಯದಲ್ಲಿ ಇನ್ಮುಂದೆ ಮಹಿಳೆಯರಿಗೆ ಬಸ್​ ಪ್ರಯಾಣ ಉಚಿತ

ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ 100 ದಿನ ಪೂರೈಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ” ಎಂದು ತಿಳಿಸಿದ್ದಾರೆ.

“ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ” ಎಂದು ಹೇಳಿದ್ದಾರೆ.

ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ:ಒಂದು ತಿಂಗಳು ಪೂರೈಸಿದ ಶಕ್ತಿ ಯೋಜನೆ : ನಾಲ್ಕು ನಿಗಮಗಳ ಸಾರಿಗೆಯಲ್ಲಿ ಪ್ರಯಾಣಿಸಿದವರೆಷ್ಟು?

ಸಮಸ್ಯೆಗಳೆಲ್ಲ ನೀಗಿವೆ: ಸಚಿವ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಪಯಕ್ತವಾಗಿದೆ. ವಿರೋಧ ಪಕ್ಷಗಳ ಟೀಕೆಗಳನ್ನು ಮೀರಿ ಈ ಯೋಜನೆ  ಯಶಸ್ವಿಯಾಗಿದೆ ನೂರು ದಿನ ಪೂರೈಸಿದೆ.

ನಿಗಮವಾರು ಮಹಿಳಾ ಪ್ರಯಾಣಿಕರು ಮತ್ತು ಟಿಕೆಟ್‌ ಮೌಲ್ಯ (ಜೂನ್‌ 11ರಿಂದ ಸೆಪ್ಟೆಂಬರ್ 18ರವರೆಗೆ-₹ಕೋಟಿಗಳಲ್ಲಿ)

            ನಿಗಮ                                     ಮಹಿಳಾ ಪ್ರಯಾಣಿಕರ       ಟಿಕೆಟ್‌ ಮೌಲ್ಯ

ಕೆ.ಎಸ್‌.ಆರ್‌.ಟಿ.ಸಿ                                18.47                                  ₹536

ಬಿ.ಎಂ.ಟಿ.ಸಿ                                          20.53                                  ₹261

ವಾಯವ್ಯ ಕರ್ನಾಟಕ ಸಾರಿಗೆ               14.44                                    ₹365

ಕಲ್ಯಾಣ ಕರ್ನಾಟಕ ಸಾರಿಗೆ                  8.53                                      ₹279

ಶಕ್ತಿ ಯೋಜನೆ:ಅನುದಾನದ ವಿವರ (ಜೂನ್‌ 23ರಿಂದ ಆಗಸ್ಟ್‌ 23ರವರೆಗೆ– ₹ ಕೋಟಿಗಳಲ್ಲಿ)

       ನಿಗಮ                                      ಸರ್ಕಾರಕ್ಕೆ ಬೇಡಿಕೆ ಮೊತ್ತ             ಬಿಡುಗೊಳಿಸಿದ ಮೊತ್ತ             ಒಟ್ಟಾರೆ ಕೊರತೆ

ಕೆ.ಎಸ್‌.ಆರ್‌.ಟಿ.ಸಿ                                                 442                                                    294                                            148

ಬಿ.ಎಂ.ಟಿ.ಸಿ;                                                          211                                                      140                                             71

ವಾಯವ್ಯ ಕರ್ನಾಟಕ ಸಾರಿಗೆ                              292                                                      201                                             91

ಕಲ್ಯಾಣ ಕರ್ನಾಟಕ ಸಾರಿಗೆ                                 223                                                      149                                              74

ಒಟ್ಟು                                                                    1168                                                    784                                             384

ಈ ಯೋಜನೆ ಆರಂಭಿಸುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳು ಇದ್ದವು. ಮುಖ್ಯವಾಗಿ ಚಾಲಕರು ಮತ್ತು ನಿರ್ವಾಹಕರ ಕೊರತೆ ಇತ್ತು. ಬಸ್ಸುಗಳ ಸಂಖ್ಯೆಯೂ ಕಡಿಮೆ ಇತ್ತು. ಈ ಸಮಸ್ಯೆಗಳನ್ನು ನಿಭಾಯಿಸಿಕೊಳ್ಳುವ ಮೂಲಕ ಯೋಜನೆಯನ್ನೂ ಯಶಸ್ವಿಗೊಳಿಸಿದ್ದೇವೆ ಎಂದು ಸಾರಿಗೆ  ಸಚಿವ ರಾಮಲಿಂಗಾರೆಡ್ಡಿ ವಿವರಿಸಿದರು. ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. 5000 ಬಸ್ಸುಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಇವೆಲ್ಲದರ ಮಧ್ಯೆಯೂ ನಮ್ಮ ಸಾರಿಗೆ ಸಂಸ್ಥೆಗಳಿಗೆ 25 ಪ್ರಶಸ್ತಿಗಳು ಬಂದಿವೆ. ವಿರೋಧ ಪಕ್ಷಗಳೂ ಈ ಯೋಜನೆ ಯಶಸ್ವಿ ಆಗುವುದಿಲ್ಲ ಎಂದು ಕಾಲೆಳೆದಿದ್ದವು. ಈ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಹಲವು ಧಾರ್ಮಿಕ ಮತ್ತು ಪ್ರವಾಸಿ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಸ್ರೀಸಬಲಿಕರಣಕ್ಕೆ ಇದೊಂದು ಉತ್ತಮ ಯೋಜನೆ ಎಂದು ಹೇಳಿದರು.

ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ ಕಾರಣವಾಗಿದೆ:

ಶಕ್ತಿ ಯೋಜನೆ ಜಾರಿಗೊಂಡ ನೂರು ದಿನಗಳ ಅವಧಿಯಲ್ಲಿ ನಾಡಿನ ಹೆಣ್ಣು ಮಕ್ಕಳಿಂದ ದೊರೆಯುತ್ತಿರುವ ಸ್ಪಂದನೆ ನಮ್ಮ ನಿರೀಕ್ಷೆಗೂ ಮೀರಿದ್ದು. ಈ ವರೆಗೆ ಒಟ್ಟು 64 ಕೋಟಿ ಮಹಿಳೆಯರು ( ಪ್ರಯಾಣ ಸಂಖ್ಯೆ ) ಉಚಿತ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದಿದ್ದು, ಇದಕ್ಕಾಗಿ ಸರ್ಕಾರವು ರೂ. 1,472 ಕೋಟಿ ವೆಚ್ಚ ಮಾಡಿದೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು,ಶಿಕ್ಷಣ, ಉದ್ಯೋಗ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ನಿತ್ಯಬದುಕಿನ ಅವಶ್ಯಕತೆಗಳಿಗಾಗಿ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ. ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ

– ಸಂತೋಷಕುಮಾರ್ ಹಳ್ಳಿಕಾರ್

ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಪ್ರತಿಕ್ರಿಯೆ:

ಶಕ್ತಿ ಯೋಜನೆಯಿಂದಾಗಿ ತುಂಬಾ ಅನುಕೂಲವಾಗಿದೆ. ದಿನಾಲು ಕೆಲಸಕ್ಕೆ ಹೋಗುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವುದರಿಂದ ತಿಂಗಳಿಗೆ 2000 ದಿಂದ 3000 ರವರೆಗೆ ಹಣ ಉಳಿತಾಯವಾಗಿದೆ. ಆದರಿಂದ ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ತುಂಬಾ ಖುಷಿ ಕೊಟ್ಟಿದೆ. ಹಾಗೂ ಬಡವರಿಗೆ ನೆಮ್ಮದಿಯಿಂದ ಜೀವನ ನಡೆಸುವುದಕ್ಕೆ ಅನುಕೂಲವಾಗಿದೆ. ಇದರಿಂದ ಉಳಿದ ಹಣವನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದಾಗಿದೆ. ಲಕ್ಷಾಂತರ ಬಡ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು ಅದೇ ಹಣದಿಂದ ಪುಸ್ತಕಗಳನ್ನು ಖರೀದಿಸಲು ಹಾಗೂ ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಖರ್ಚು ಮಾಡಲು ಸಹಾಯವಾಗಿದೆ. ಈ ಯೋಜನೆ ಜಾರಿಗೆ ಬಂದಾಗಿನಿಂದ ಶಾಲಾ ಕಾಲೇಜುಗಳಿಗೆ ದಿನನಿತ್ಯ ಹೋಗುವ ಹೆಣ್ಣುಮಕ್ಕಳ ಸಂಖ್ಯೆಯೂ ಹೆಚ್ಚಾಗಿದೆ. ಒಟ್ಟಾರೆಯಾಗಿ ಈ ಒಂದು ಯೋಜನೆಯು ಮಹಿಳೆಯರಿಗೆ  ಅತ್ಯಂತ ಖುಷಿ ನೀಡಿದೆ ಎಂಬುದಕ್ಕೆ ಕಾರಣವಾಗಿದೆ ಎಂದು ಹೇಳಿದರು.

-ಅಶ್ವಿನಿ ಹೊಸೂರು, ಹೊಸಪೇಟೆ

ತಿಳುವಳಿಕೆ ಬಂದಾಗಿಂದ ಇದೆ ಮೊದಲು ಅತೀ ಸರಳವಾಗಿ ಸರ್ಕಾರದ ಯೋಜನೆಯ ಫಲ ನನಗ ಸಿಕ್ಕಿದ್ದು ಇದೆ ಮೊದಲು. ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಒಂದಾದ “ಶಕ್ತಿ” ಯೋಜನೆ ಯಶಸ್ವಿಯಾಗಿ ಮುನ್ನಡೆಯಲಿ ಶುಭಾಶಯಗಳು..

-ರೇಣುಕಾ ಹನ್ನುರ್, ಕಲಬುರಗಿ

ಶಕ್ತಿ ಯೋಜನೆಯು ನೂರು ದಿನ ಪೂರೈಸಿದ್ದು ತುಂಬಾ ಸಂತೋಷವಾಗಿದೆ. ಮಹಿಳೆಯರಿಗೆ ತುಂಬಾ ಉಪಯೋಗವಾಗುತ್ತಿದೆ. ಯೋಜನೆಯು ಹೀಗೆ ಮುಂದುವರೆಯಬೇಕು. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಕ್ಕಳಿಗೆ, ಶಿಕ್ಷಣ, ಉದ್ಯೋಗ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ನಿತ್ಯಬದುಕಿನ ಅವಶ್ಯಕತೆಗಳಿಗಾಗಿ ಪ್ರಯಾಣ ಬೆಳೆಸುವ ಮಹಿಳೆಯರಿಗೆ ಅನುಕೂಲವಾಗಿದೆ.

-ರಮ್ಯಾ ಬೆಂಗಳೂರು

ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ. ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ. ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ.

– ಮಧುಮಾಲಾ. ಸಿ

ವಿಡಿಯೋ ನೋಡಿ:“ಶಕ್ತಿ” ಯೋಜನೆಯ ಉದ್ಘಾಟನಾ ಸಮಾರಂಭ | Vidhana Soudha | Shakti Scheme |

Donate Janashakthi Media

Leave a Reply

Your email address will not be published. Required fields are marked *