68ನೇ ಕರ್ನಾಟಕ ರಾಜ್ಯೋತ್ಸವ| ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 68ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ 

ಇದನ್ನೂ ಓದಿ:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರಿಗೆ,10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಇಲ್ಲಿದೆ ವಿಜೇತರ ವಿವರ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎನ್​.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಡಿಯೋ ನೋಡಿ:68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ 2023 – ನೇರಪ್ರಸಾರ

 

 

Donate Janashakthi Media

Leave a Reply

Your email address will not be published. Required fields are marked *