ಬೆಂಗಳೂರು| 7 ಕೋಟಿ ದರೋಡೆ ಪ್ರಕರಣ: ಎಲ್ಲಾ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ ಬಂಧಿಸಿದ್ದಾರೆ. ದೋಚಲ್ಪಟ್ಟ 7.11 ಕೋಟಿ ರೂ.ಗಳಲ್ಲಿ 5 ಕೋಟಿ 76 ಲಕ್ಷಕ್ಕೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಬಹುತೇಕ ಎಲ್ಲಾ ಆರೋಪಿಗಳ ಬಂಧನವಾಗಿದೆ ಎನ್ನಲಾಗಿದೆ. ಬೆಂಗಳೂರು

ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ ಕಳೆದ ರಾತ್ರಿ 5 ಕೋಟಿ 76 ಲಕ್ಷ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ರವಿ ಮೂಲತಃ ಆಂದ್ರದ ಚಿತ್ತೂರು ಜಿಲ್ಲೆ ನಿವಾಸಿಯಾಗಿದ್ದು, ಈತ ಪೊಲೀಸ್ ಪೇದೆ ಅಣ್ಣಪ್ಪನ ಜೊತೆಗೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದ್ದು, ಇದೀಗ ಚಿತ್ತಾಪುರದಲ್ಲಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿದ್ದಾನೆ.

ಇದನ್ನೂ ಓದಿ: ಮೆಕ್ಕೆಜೋಳ ರೈತರ ಪ್ರತಿಭಟನೆ: 10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರ ತೀರ್ಮಾನ

ಕಳ್ಳತನವಾಗಿದ್ದ 11 ಕೋಟಿ ಪೈಕಿ 6 ಕೋಟಿ 70 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನ ಪೊಲೀಸರು ಸದ್ಯದಲ್ಲೇ ವಶಪಡಿಸಿಕೊಳ್ಳಲಿದ್ದಾರೆ.

ಬೆಂಗಳೂರಿನ ನಿವಾಸಿಯಾದ ಮತ್ತೋರ್ವ ಆರೋಪಿ ಜೆ.ಎಕ್ಸ್ ವಿಯರ್ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದನು. ಪೊಲೀಸರು ಆತನನ್ನ ಕೂಡ ಕಾರ್ಯಾಚರಣೆ ನಡೆಸಿ ಬಂಧಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಈತನನ್ನ ಬಂಧಿಸಿ ಪೊಲೀಸರು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಆರೋಪಿಗಳು ದರೋಡೆಗಾಗಿ ನಂಬರ್ ಪ್ಲೇಟ್ ಇಲ್ಲದ ವ್ಯಾಗನರ್ ಕಾರ್ ಬಳಸಿದ್ದು, ನವೆಂಬರ್.19ರಂದು ಅಶೋಕ್ ಪಿಲ್ಲರ್ ಬಳಿ ಸಿಎಂಸಿ ಹಣ ಸಾಗಣೆ ವಾಹನ ಬರುವ ಮುನ್ನ ವ್ಯಾಗನರ್ ಯು-ಟರ್ನ್ ಆಗಿ ಕಾದಿದ್ದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ದರೋಡೆಕೋರರು RBI ಅಧಿಕಾರಿಗಳೆಂದು ಪರಿಚಯಿಸಿಕೊಂಡು ಸಿಬ್ಬಂದಿಯನ್ನು ಕಾರಿಗೆ ಹತ್ತಿಸಿಕೊಂಡಿದ್ದರು.

ಬೆಂಗಳೂರಲ್ಲಿ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಪೊಲೀಸ್ ಕಾನ್ ಸ್ಟೇಬಲ್ ಅಣ್ಣಪ್ಪ ಹಾಗೂ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಎಲ್ಲಾ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದರು. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಎಲ್ಲರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ನೋಡಿ: ಬಿಹಾರಕ್ಕೆ ಮತ್ತೆ ‌ನಿತೀಶ್‌ ಕುಮಾರ್! 50:50 ಲೆಕ್ಕಾಚಾರದಲ್ಲಿ ಬಿಜೆಪಿ!!? Janashakthi Media #BiharResults

Donate Janashakthi Media

Leave a Reply

Your email address will not be published. Required fields are marked *